ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಜಟ್ವಾಲ್ ಪ್ರದೇಶದಲ್ಲಿ ಮಾತಾ ವೈಷ್ಣೋದೇವಿ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನ ಒಂದು ಟೈರ್ ಸ್ಫೋಟಗೊಂಡು 20 ಅಡಿ ಆಳದ ಚರಂಡಿಗೆ ಉರುಳಿ ಬಿದ್ದಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಬಸ್ನಲ್ಲಿ 70 ಮಂದಿ ಇದ್ದರು ಎನ್ನಲಾಗಿದೆ. 40 ಮಂದಿ ಗಾಯಗೊಂಡಿದ್ದಾರೆ. ಸಾಂಬಾ ಜಿಲ್ಲೆಯ ಜಟ್ವಾಲ್ ಎಂಬ ಗ್ರಾಮದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಉತ್ತರ ಪ್ರದೇಶದಿಂದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿಗೆ ಬರುತ್ತಿದ್ದ ಬಸ್ನಲ್ಲಿ 65 ರಿಂದ 70 ಭಕ್ತರು ತುಂಬಿದ್ದರು. ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಉಳಿದವರೆಲ್ಲರೂ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
For More Updates Join our WhatsApp Group :

