Job Notification || Bank of Barodaದಲ್ಲಿ 500 ಜವಾನ ಹುದ್ದೆ : ಕರ್ನಾಟಕದ ಅಭ್ಯರ್ಥಿಗಳಿಗೂ ಅವಕಾಶ

Job Notification || Bank of Barodaದಲ್ಲಿ 500 ಜವಾನ ಹುದ್ದೆ : ಕರ್ನಾಟಕದ ಅಭ್ಯರ್ಥಿಗಳಿಗೂ ಅವಕಾಶ

ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟಂಟ್ (ಜವಾನ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶಾದ್ಯಂತ ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಹುದ್ದೆ ವಿವರ: ಒಟ್ಟು ಹುದ್ದೆಗಳು – 500

ಕರ್ನಾಟಕದಲ್ಲಿರುವ ಖಾಲಿ ಹುದ್ದೆಗಳು – 31

ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್ಎಸ್ಎಲ್ಸಿಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ರಾಜ್ಯದ ಪ್ರಾದೇಶಿಕ ಭಾಷೆಯಲ್ಲಿ ಓದಲು, ಬರೆಯಲು ಹಾಗೂ ಮಾತನಾಡಲು ಬರಬೇಕು.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ, ಗರಿಷ್ಠ 26 ವರ್ಷ ಮೀರಿರಬಾರದು.

ವೇತನ: ಮಾಸಿಕ 19,500 ರೂನಿಂದ 37,815ರೂ.ವರೆಗೆ ಇರಲಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 600 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ 100 ರೂ. ನಿಗದಿಸಲಾಗಿದೆ.

ಈ ಹುದ್ದೆಗೆ ಮೇ 3ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 23 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ಜಾಲತಾಣ bankofbaroda.in ಇಲ್ಲಿಗೆ ಭೇಟಿ ನೀಡಿ.

Leave a Reply

Your email address will not be published. Required fields are marked *