ಬಿಇಎಲ್ನಲ್ಲಿ ಉದ್ಯೋಗಾವಕಾಶ; ಮಾಹಿತಿ ಇಲ್ಲಿದೆ ತಿಳಿಯಿರಿ

ಬಿಇಎಲ್ನಲ್ಲಿ ಉದ್ಯೋಗಾವಕಾಶ; ಮಾಹಿತಿ ಇಲ್ಲಿದೆ ತಿಳಿಯಿರಿ

ಇತ್ತೀಚಿನ ದಿನಗಳಲ್ಲಿ ಉದ್ಯೋಗವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಖಾಲಿಯಿರುವ 350 ಹುದ್ದೆಗಳಿಗೆ ಬಿಇಎಲ್ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ತಾಂತ್ರಿಕ ವಿಭಾಗದಲ್ಲಿ ವ್ಯಾಸಂಗ ಮಾಡಿದವರಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಖಾಲಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ವಿಜ್ಞಾನ ವಿಭಾಗದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅಲ್ಲದೇ ಬಿಇಎಲ್ ಕಂಪನಿಯು ಪ್ರತಿಷ್ಠಿತಿ ಸಂಸ್ಥೆ ಆಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎಲ್ಲಾ ಸರ್ಕಾರಿ ಸೌಕರ್ಯಗಳು ಸರಿಯಾದ ಸಮಯಕ್ಕೆ ಲಭ್ಯ ಆಗಲಿವೆ. ವರ್ಗವಾರು ಹುದ್ದೆಗಳು ವರ್ಗೀಕರಣ: ಸಾಮಾನ್ಯ 143, ಇಡಬ್ಲುಎಸ್ 35, ಒಬಿಸಿ 94, ಎಸ್ಸಿ 52 ಹಾಗೂ ಎಸ್ಟಿ ವರ್ಗದವರಿಗೆ 26 ಉದ್ಯೋಗಗಳು ಖಾಲಿಯಿವೆ. ಉದ್ಯೋಗದ ಹೆಸರು ಪ್ರೊಬೇಷನರಿ ಇಂಜಿನಿಯರ್ ಆಗಿದ್ದು, ಪ್ರೊಬೇಷನರಿ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್)- 200, ಪ್ರೊಬೇಷನರಿ ಇಂಜಿನಿಯರ್ (ಮೆಕನಿಕಲ್)- 150 ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 40,000ದಿಂದ 1,40,000 ರೂಪಾಯಿವರೆಗೂ ಇರಲಿದೆ. ಅರ್ಜಿ ಸಲ್ಲಿಸಬಯಸುವವರು ಹೆಚ್ಚಿನ ಬಿಇಎಲ್ ಸಂಸ್ಥೆಯ https://bel-india.in/ ವೆಬ್ ಸೈಟ್ಗೆ ಭೇಟಿ ನೀಡಬಹುದಾಗಿದೆ.

ಶೈಕ್ಷಣಿಕ ಅರ್ಹತೆಗಳನ್ನು ನೋಡೋದಾದ್ರೆ, ಅರ್ಜಿ ಸಲ್ಲಿಸಬಯಸುವವರು ಬಿಇ, ಬಿಟೆಕ್, ಬಿಎಸ್ಸಿ, (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್, ಮೆಕನಿಕಲ್) ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ. ಅರ್ಜಿ ಸಲ್ಲಿಕೆ ಶುಲ್ಕ ಸಾಮಾನ್ಯ, ಇಡಬ್ಲುಎಸ್, ಒಬಿಸಿ ಅಭ್ಯರ್ಥಿಗಳು ಜಿಎಸ್ಟಿ ಸೇರಿ 1,180 ರೂಪಾಯಿ ಕಟ್ಟಬೇಕಾಗುತ್ತದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರು, ಮಾಜಿ ಸೈನಿಕರಿಗೆ ಶುಲ್ಕದ ವಿನಾಯತಿ ಇದೆ. 25 ವರ್ಷ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಕೆ ಜನವರಿ 10, 2025ರಿಂ ಆರಂಭವಾಗಿದ್ದು, ಕೊನೇ ದಿನಾಂಕ ಜನವರಿ 31 ಆಗಿದೆ. ಮಾರ್ಚ್ನಲ್ಲಿ ಪರೀಕ್ಷೆ ನಡೆಯಲಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ https://test.cbexams.com/EDPSU/BEL/Apps/Registration/RegStep.aspx ಗೆ ಭೇಟಿ ನೀಡಬಹುದಾಗಿದೆ.

Leave a Reply

Your email address will not be published. Required fields are marked *