ಪದವಿ ಆದವರಿಗೆ ಉದ್ಯೋಗವಕಾಶ

ಬೆಂಗಳೂರು: ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್​ ಆಗಿರುವ ಇಂಡಿಯನ್​ ಬ್ಯಾಂಕ್​ನಲ್ಲಿ ಸ್ಥಳೀಯ ಬ್ಯಾಂಕ್​ ಅಧಿಕಾರಿ (ಲೋಕಲ್​ ಬ್ಯಾಂಕ್​ ಅಫೀಸರ್​) ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಸಲಾಗಿದೆ. ಕರ್ನಾಟಕ, ಸೇರಿದಂತೆ ಐದು ರಾಜ್ಯಗಳಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ಒಟ್ಟು 300 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ 35 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿ ಅಧಿಕೃತ ಮಂಡಳಿ ಅಥವಾ ವಿಶ್ವವಿದ್ಯಾಲಯದ ಅಡಿಯಲ್ಲಿ ಪದವಿಯನ್ನು ಪೂರ್ಣಗೊಳಿಸಿದರಬೇಕು. ಕರ್ನಾಟಕ ಹುದ್ದೆಗಳಿಗೆ ಅರ್ಜಿ ಬಯಸುವ ಅಭ್ಯರ್ಥಿಗಳು ಕನ್ನಡ ಬರೆಯಲು, ಓದಲು, ಮಾತನಾಡಲು ತಿಳಿದಿರಬೇಕು.

ವಿದ್ಯಾರ್ಹತೆ: ಅಭ್ಯರ್ಥಿ ಕನಿಷ್ಠ 20, ಗರಿಷ್ಠ 30 ವರ್ಷ ವಯೋಮಿತಿ ಇರಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ. ಜಾ, ಪ. ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 175ರೂ. ಹಾಗೂ ಇತರೆ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ಇದೆ.

ಈ ಹುದ್ದೆಗಳಿಗೆ ಆಗಸ್ಟ್​ 13 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್​ 2 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು indianbank.in ಗೆ ಭೇಟಿ ನೀಡಬಹುದಾಗಿದೆ.

ಅಂಗನವಾಡಿ ನೇಮಕಾತಿ: ಬಳ್ಳಾರಿ ನಗರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 22 ಅಂಗನವಾಡಿ ಕಾರ್ಯಕರ್ತರು, 119 ಅಂಗನಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Leave a Reply

Your email address will not be published. Required fields are marked *