ಕರ್ನಾಟಕ ರಾಜ್ಯ ಮುಕ್ತ ವಿವಿ ವತಿಯಿಂದ ಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕೆ.ಇ.ಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರ ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ(ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತರು ಹೆಸರು ನೋಂದಣಿ ಮಾಡಬಹುದಾಗಿದೆ.

ಆಸಕ್ತರು ಇದೇ 2024ರ ಆಗಸ್ಟ್ 09ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಿಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ದೂರವಾಣಿ ಸಂಖ್ಯೆ; 0821-2515944ಗೆ ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆ.ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *