ಕಲಬುರಗಿ: ಸ್ನೇಹಿತರೊಂದಿಗೆ ಈಜಲು ತೆರಳಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಾಳ ಬಳಿ ಭೀಮಾ ನದಿಯಲ್ಲಿ ನಡೆದಿದೆ

ಆದರ್ಶ ವಿದ್ಯಾಲಯದಲ್ಲಿ ಓದುತ್ತಿದ್ದ ಪ್ರಜ್ವಲ್ ಹರವಾಳ (16) ಮೃತ ದುರ್ದೈವಿ. ಎರಡು ದಿನಗಳ ರಜೆಯ ಕಾರಣ ಪ್ರಜ್ವಲ್ ಸ್ವಗ್ರಾಮ ಹರವಾಳಕ್ಕೆ ಬಂದಿದ್ದ. ಈ ವೇಳೆ ಸ್ನೇಹಿತರೊಂದಿಗೆ ಸೇರಿ ಭೀಮಾ ನದಿಗೆ ಈಜಲು ತೆರಳಿದ್ದ. ನೀರಿನ ಆಳ ಲೆಕ್ಕಿಸದೇ ನದಿಗೆ ಇಳಿದ ಪರಿಣಾಮ ನೀರು ಪಾಲಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ತೀವ್ರ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸದ್ಯ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.