ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ – ಕರವೇ ಆಕ್ರೋಶ

ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ – ಕರವೇ ಆಕ್ರೋಶ

ಕನ್ನಡಕ್ಕೆ ಅವಕಾಶಇಲ್ಲದಪರೀಕ್ಷೆ ವಿವಾದ.

ಹುಬ್ಬಳ್ಳಿ : ವಿಭಾಗದ ನೈರುತ್ಯ ರೈಲ್ವೆ ಇಲಾಖಾ ಪದೋನ್ನತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಕೈಬಿಟ್ಟಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎನ್. ನಾರಾಯಣಗೌಡ ಈ ಕ್ರಮವನ್ನು ಖಂಡಿಸಿ, ಇದು ಕನ್ನಡಿಗರ ಹಕ್ಕುಗಳ ಮೇಲಿನ ದಾಳಿ ಎಂದು ಆರೋಪಿಸಿದ್ದಾರೆ.

39 ಆಫೀಸ್ ಸೂಪರಿಂಟೆಂಡೆಂಟ್, 25 ಸೀನಿಯರ್ ಕ್ಲಾರ್ಕ್ ಮತ್ತು 9 ಅಪ್ರೆಂಟಿಸ್ ಮೆಕಾನಿಕ್ ಹುದ್ದೆಗಳಿಗಾಗಿ ಪರೀಕ್ಷೆ ನಡೆಯಲಿದ್ದು, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ನಡೆಸಲಾಗುತ್ತಿದೆ.ಕನ್ನಡ ಮಾಧ್ಯಮದಲ್ಲಿ ಓದಿದ ಅಭ್ಯರ್ಥಿಗಳು ಇಂಗ್ಲಿಷ್-ಹಿಂದಿ ಪರೀಕ್ಷೆಯಿಂದ ಪದೋನ್ನತಿ ಅವಕಾಶ ಕಳೆದುಕೊಳ್ಳುತ್ತಿದ್ದಾರೆ ಎಂದು ಕರವೇ ಆಕ್ರೋಶ ವ್ಯಕ್ತಪಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಲಾಗಿದೆ.ಕನ್ನಡದಲ್ಲೂ ಪರೀಕ್ಷೆ ನಡೆಸದಿದ್ದರೆ ರಾಜ್ಯಾದ್ಯಂತ ರೈಲು ತಡೆ ಹೋರಾಟ ನಡೆಸುವುದಾಗಿ ಕರವೇ ಎಚ್ಚರಿಕೆ ನೀಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

 

Leave a Reply

Your email address will not be published. Required fields are marked *