Karnataka Board of Film Commerce: ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಾಳೆ ಚಿತ್ರೋದ್ಯಮ ಬಂದ್..!!

ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಈ ಹೋರಾಟಕ್ಕೆ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ಚಿತ್ರೋದ್ಯಮ ಬಂದ್ ಮಾಡುವ ಮೂಲಕ ಹೋರಾಟಕ್ಕೆ ಇಳಿಯುವುದಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿನ್ನೆ ಹೇಳಿಕೆ ನೀಡಿತ್ತು. ಆದರೆ, ಈ ಹೋರಾಟದ ನೇತೃತ್ವವನ್ನು ವಹಿಸುವವರು ಯಾರು ಎನ್ನುವ ಪ್ರಶ್ನೆ ಕೂಡ ಮೂಡಿತ್ತು.

ಶಿವರಾಜ್ ಕುಮಾರ್

ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ, ನಾಳೆಯ ಹೋರಾಟಕ್ಕೆ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಹೀಗಾಗಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಾಳೆ ಗುರುರಾಜ್‌ ಕಲ್ಯಾಣ ಮಂಟಪದ ಬಳಿ ಚಿತ್ರೋದ್ಯಮ ಹೋರಾಟಕ್ಕೆ ಇಳಿಯಲಿದೆ.

ಸಾಕಷ್ಟು ವರ್ಷಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸೆ.29ರಂದು ಕರ್ನಾಟಕ ಬಂದ್ ಕರೆ ನೀಡಿದ್ದು, ಸೀರಿಯಲ್, ಸಿನಿಮಾ ಚಿತ್ರೀಕರಣ, ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಮೂಲಕ ಚಿತ್ರೋದ್ಯಮ ಸಾಥ್ ನೀಡುತ್ತಿದೆ. 

ನಾಳೆಯ ಪ್ರತಿಭಟನೆಯಲ್ಲಿ ಶಿವಣ್ಣ, ಉಪೇಂದ್ರ, ರಾಘಣ್ಣ, ನೆನಪಿರಲಿ ಪ್ರೇಮ್, ಅಜಯ್ ರಾವ್, ಪ್ರಜ್ವಲ್ ದೇವರಾಜ್, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಕಿರುತೆರೆ ನಟ- ನಟಿಯರು ಭಾಗಿಯಾಗುವ ಸಾಧ್ಯತೆ ಇದೆ. ಫಿಲ್ಮ್ ಚೇಂಬರ್ ಅಂಗ ಸಂಸ್ಥೆಗಳಾದ, ನಿರ್ಮಾಪಕರ ಸಂಘ, ಕಲಾವಿದರ ಸಂಘ, ನಿರ್ದೇಶಕರ ಸಂಘದಿಂದ, ಒಕ್ಕೂಟದಿಂದಲೂ ಕರ್ನಾಟಕ ಬೆಂಬಲಿಸಲಿದ್ದಾರೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *