ನವದೆಹಲಿ: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಚರ್ಚೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಅಧಿವೇಶನ ಮುಗಿದ ಬಳಿಕ ಮತ್ತೆ ಕುರ್ಚಿ ಕಿಚ್ಚು ಭುಗಿಲೇಳು ಸಾಧ್ಯತೆ ಇದೆ. ಅಷ್ಟರಲ್ಲಿ ಕಿತ್ತಾಟಕ್ಕೆ ಮದ್ದರೆಯಲು ಹೈಕಮಾಂಡ್ ಯೋಜನೆ ಹಾಕಿಕೊಳ್ಳುತ್ತಿದೆ. ಸದ್ಯಕ್ಕೆ ಬೀಸುವ ದೊಣ್ಣೆಯಿಂದ ಹೈಕಮಾಂಡ್ ಪಾರಾಗಿದ್ದು, ಇದೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ರನ್ನು ದೆಹಲಿಗೆ ಕರೆಸಿ ಮಾತಾಡುವ ಸಾಧ್ಯತೆ ಇದೆ. ಈಮಧ್ಯೆ ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಭಾನುವಾರ ಮಹತ್ವದ ಸಭೆ ನಡೆದಿದೆ. ಕಾಂಗ್ರೆಸ್ ಸಂಸದೀಯ ಸಭೆ ಬಳಿಕ ಸೋನಿಯಾ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೆಲ ಹೊತ್ತು ರಾಜ್ಯ ವಿದ್ಯಾಮಾನಗಳ ಬಗ್ಗೆ ಚರ್ಚಿಸಿದ್ದಾರೆ. ಸೋನಿಯಾಗೆ ವರದಿ ನೀಡಿರುವ ಮಲ್ಲಿಕಾರ್ಜುನ ಖರ್ಗೆ, ಗೊಂದಲಕ್ಕೆ ತೆರೆ ಎಳೆಯುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರವಾಗಿ ಎರಡ್ಮೂರು ನಿಮಿಷಗಳ ಕಾಲ ಖೆರ್ಗೆ ಹಾಗೂ ಸೋನಿಯಾ ಚರ್ಚಿಸಿದ್ದಾರೆ. ಸೋನಿಯಾಗೆ ವರದಿ ನೀಡಿರುವ ಮಲ್ಲಿಕಾರ್ಜುನ ಖರ್ಗೆ, ಸದ್ಯ ಗೊಂದಲಕ್ಕೆ ತೆರೆ ಎಳೆಯುವಂತೆ ಮನವಿ ಮಾಡಿದ್ದಾರೆ.
ನನ್ನ -ಸಿಎಂ ನಡುವೆ ಭಿನ್ನಾಭಿಪ್ರಾಯವಿಲ್ಲ: ಡಿಕೆ ಶಿವಕುಮಾರ್ ಪುನರುಚ್ಚಾರ
ಏತನ್ಮಧ್ಯೆ, ಬ್ರೇಕ್ಫಾಸ್ಟ್ ಮೀಟಿಂಗ್ ಕುರಿತು ಮತ್ತೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಹಾಗೂ ತಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಪುನರುಚ್ಚರಿಸಿದ್ದಾರೆ. ನಾನು ಯಾವತ್ತೂ ಗುಂಪುಗಾರಿಕೆ ಮಾಡಲ್ಲ. ಏಳೆಂಟು ಶಾಸಕರನ್ನ ದೆಹಲಿಗೆ ಕರೆದುಕೊಂಡು ಹೋಗುವುದು ದೊಡ್ಡ ಕೆಲಸವಲ್ಲ. ನಾನು ಪಕ್ಷದ ಅಧ್ಯಕ್ಷ. 140 ಶಾಸಕರನ್ನು ಕರೆದುಕೊಂಡು ಒಟ್ಟಿಗೆ ಹೋಗುತ್ತೇನೆ ಎಂದಿದ್ದಾರೆ. ಇನ್ನು ದೆಹಲಿಗೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅದು ನಮ್ಮ ದೇವಸ್ಥಾನ ಎಂದರು.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH
