ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಪಥಸಂಚಲನ ನಿರ್ಬಂಧಿಸುವ ಸಂಬಂಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ನ ಧಾರವಾಡ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್ಗೆ ನೋಟಿಸ್ ನೀಡಿದೆ.
ಆರ್ಎಸ್ಎಸ್ ಪಥಸಂಚಲನ ನಿರ್ಬಂಧ ಬಗ್ಗೆ ಹೈಕೋರ್ಟ್ ಹೇಳಿದ್ದೇನು?
2025 ರ ಅ.18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್ಎಸ್ಎಸ್ ಪ್ರಶ್ನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ನ ಧಾರವಾಡ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ಅಭಿಪ್ರಾಯಪಟ್ಟಿದೆ.
For More Updates Join our WhatsApp Group :

