ಕರ್ನಾಟಕ: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ರಾಜ್ಯದಲ್ಲಿ ಇದೀಗ ಈ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಹಾಗಾದ್ರೆ ಏನೆಲ್ಲಾ ಬದಲಾವಣೆ ಮಾಡಿಸಬಹುದು ಹಾಗೂ ಸರಳ ವಿಧಾನಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಆಗಾಗ ಸಿಹಿಸುದ್ದಿಯನ್ನು ನೀಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆದುಹಾಕಲು ಮತ್ತಷ್ಟು ಸರಳ ಮಾಡಲಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿಗೆ ಬೆಂಗಳೂರು ಒನ್, ಗ್ರಾಮ ಒನ್, ಸೈಬರ್ ಸೆಂಟರ್ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಸಗ ಆನ್ಲೈನಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು * ಸದಸ್ಯರ ಆಧಾರ ಕಾರ್ಡ್ * ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ * ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ ಪತ್ನಿ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು * ಆಧಾರ್ ಕಾರ್ಡ್ * ಮದುವೆ ಪ್ರಮಾಣ ಪತ್ರ * ಪೋಷಕರ ಪಡಿತರ ಚೀಟಿ
ಮಗುವಿನ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು * ಮಗುವಿನ ಜನನ ಪ್ರಮಾಣಪತ್ರ * ಪೋಷಕರ ಆಧಾರ್ ಕಾರ್ಡ್ ಕುಟುಂಬದ ಸದಸ್ಯರ ಹೆಸರು ಸೇರ್ಪಡೆಗೆ ಗಮನಿಸಬೇಕಾದ ಅಂಶಗಳು * ಆನ್ಲೈನ್ನಲ್ಲಿ ಪಡಿತರ ಚೀಟಿಗೆ ಕುಟುಂಬದ ಯಾವುದೇ ಸದಸ್ಯರ ಹೆಸರು ಸೇರ್ಪಡೆ ಮಾಡಲು ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. * ನೀವು ಐಡಿ ಅನ್ನು ರಚಿಸಬೇಕಾಗುತ್ತದೆ. * ಐಡಿಯನ್ನು ಈಗಾಗಲೇ ರಚಿಸಿದ್ದರೆ, ಲಾಗಿನ್ ಆಗಬೇಕು. * ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡಬಹುದಾಗಿದ್ದು, ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರ್ಪಡೆ ಆಯ್ಕೆಯನ್ನ ಪಡೆಯುತ್ತೀರಿ. ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ * ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ * ಜೊತೆಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು * ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು * ವಿವರಗಳು ಮತ್ತು ದಾಖಲೆಗಳನ್ನ ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು ಬಳಿಕ ನಿಮ್ಮ ನೋಂದಣಿ ಸಂಖ್ಯೆಯನ್ನು ನೀವು ಪಡೆಯುತ್ತೀರಿ. ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ನೀವು ಟ್ರ್ಯಾಕ್ ಮಾಡಬಹುದು. ನಂತರ ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಎಲ್ಲಾ ಸರಿಯಾಗಿ ಇದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರರ್ಪಡೆ ಮಾಡಲಾಗುವುದು. ಸಮೀಪದ ನ್ಯಾಯಬೆಲೆ ಅಂಗಡಿಗೆ ಹೋಗಿ ಈ ಬಗ್ಗೆ ವಿಚಾರಣೆ ಮಾಡಬಹುದು.
ಅರ್ಜಿ ಸಲ್ಲಿಸುವುದು ಹೇಗೆ? * ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ * ಮುಖ್ಯ ಪುಟದಲ್ಲಿ ಇ-ಸೇವೆಗಳ ಮೇಲೆ ಆಯ್ಕೆ ಮಾಡಿ * ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ * ಹೊಸ ಪೇಜ್ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ * ನಂತರ ಕೇಳಲಾದ ಎಲ್ಲ ದಾಖಲೆಗಳನ್ನ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ ಫಾರ್ಮ್ ಅನ್ನು ಸಬ್ಮೀಟ್ ಮಾಡಿ * ಅರ್ಜಿ ಸಲ್ಲಿಕೆ ವೇಳೆ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ಬರುತ್ತದೆ.