ಕರ್ನಾಟಕದ ರೆವೆನ್ಯೂ ಇಲಾಖೆಯಲ್ಲಿ ಬೃಹತ್ ಹುದ್ದೆಗಳ ನೇಮಕಾತಿ

ಕರ್ನಾಟಕದ ರೆವೆನ್ಯೂ ಇಲಾಖೆಯಲ್ಲಿ ಬೃಹತ್ ಹುದ್ದೆಗಳ ನೇಮಕಾತಿ

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2024 ರಲ್ಲಿ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆಯನ್ನ ಹೊರಡಿಸಿದ್ದು,  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಇನ್ನು ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ವೆಬ್ ಸೈಟ್ ನ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:               ಕರ್ನಾಟಕ ಕಂದಾಯ ಇಲಾಖೆ –  Karnataka Revenue Department Recruitment

ಹುದ್ದೆಗಳ ಹೆಸರು:           ಗ್ರಾಮ ಲೆಕ್ಕಾಧಿಕಾರಿ

ಒಟ್ಟು ಹುದ್ದೆಗಳು            1000

ಅರ್ಜಿ ಸಲ್ಲಿಸುವ ಬಗೆ _ ಆನ್ಲೈನ್

ಇನ್ನು ವಿದ್ಯಾರ್ಹತೆಯ ವಿಚಾರಕ್ಕೆ ಬಂದ್ರೆ : ಅಭ್ಯರ್ಥಿಗಳು 12ನೇ ತರಗತಿ ಪೂರ್ಣಗೊಳಿಸಿರಬೇಕು ಮತ್ತು ಡಿಪ್ಲೋಮಾ, 2 ವರ್ಷದ ಐಟಿಐ, ಜೆಎಲ್‌ಡಿಸಿ ಮುಗಿಸಿದವರು ಅರ್ಜಿ ಹಾಕಬಹುದು.

ಈ ಹುದ್ದೆಗೆ ವಯೋಮಿತಿಯು ಹೀಗಿದೆ : ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದoದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ, ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಇರ ತಕ್ಕದ್ದು.

ಇನ್ನು ವೇತನಶ್ರೇಣಿ: ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಶುಲ್ಕ ಹೀಗಿವೆ :

• ಪ.ಜಾತಿ/ಪ.ಪಂ/ಪ್ರ೧/ ಅಭ್ಯರ್ಥಿಗಳು ರೂ. 500/-

• 2ಎ,2ಬಿ,3ಎ,3ಬಿ  ಅಭ್ಯರ್ಥಿಗಳು ರೂ. 750/-

• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300/-

ಇನ್ನು ಈ ಹುದ್ದೆಯ ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19 ಸೆಪ್ಟೆಂಬರ್ 2024

ಅರ್ಜಿ ಸಲಿಸಲು ಕೊನೆಯ ದಿನಾಂಕ – 29 ಸೆಪ್ಟೆಂಬರ್ 2024 ಇನ್ನು ಹೆಚ್ಚಿನ ಮಾಹಿತಿಗಳಿಗಾಗಿ ಕಂದಾಯ ಇಲಾಖೆಯ ಅಧಿಕೃತ ವೆಬ್ ಸೈಟ್ ಆದಂತಹ : https://kandaya.karnataka.gov.in/ ಗೆ ಭೇಟಿ ನೀಡಿ.

Leave a Reply

Your email address will not be published. Required fields are marked *