ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಇತರ ಕೆಳ ವರ್ಗಗಳ ಕಲ್ಯಾಣಕ್ಕಾಗಿ 5 ಹೊಸ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಗಳು ಹಾಗೂ ವೈದ್ಯಕೀಯ/ಇಂಜಿನಿಯರಿಂಗ್ ನಿಲಯಾರ್ಥಿಗಳಿಗೆ ಮಾಸಿಕ ನಿರ್ವಹಣಾ ವೆಚ್ಚವೂ ಸೇರಿವೆ. ಶೈಕ್ಷಣಿಕ ಪ್ರೋತ್ಸಾಹ ಮತ್ತು ಆರ್ಥಿಕ ಸಹಾಯ ಪಡೆಯಲು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ (ಎಸ್.ಸಿ.) ಮತ್ತು ಇತರ ಕೆಳ ವರ್ಗಗಳ ಕಲ್ಯಾಣ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತದೆ. ಈ ಇಲಾಖೆಯ ಮುಖ್ಯ ಉದ್ದೇಶ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಆರ್ಥಿಕ ಸಹಾಯ, ಶೈಕ್ಷಣಿಕ ಪ್ರೋತ್ಸಾಹ, ಮತ್ತು ವಸತಿ ಸೌಲಭ್ಯಗಳನ್ನು ಒದಗಿಸುವುದು. ಇದೀಗ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ:
- ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ
- ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ
- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ.
- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (ಆಡಳಿತ ಮಂಡಳಿ ಕೋಟಾದ ವಿದ್ಯಾರ್ಥಿಗಳಿಗೆ)
- ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜು ನಿಲಯಾರ್ಥಿಗಳಿಗೆ ಮಾಸಿಕ ನಿರ್ವಹಣಾ ವೆಚ್ಚ.
ಯಾರು ಅರ್ಜಿ ಸಲ್ಲಿಸಬಹುದು?
ಸಾಮಾನ್ಯವಾಗಿ ಈ ಯೋಜನೆಗಳು ಮತ್ತು ಸೌಲಭ್ಯಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ಮೀಸಲಾಗಿವೆ. ನಿರ್ದಿಷ್ಟ ಯೋಜನೆಯನ್ನು ಅವಲಂಬಿಸಿ ಅರ್ಹತಾ ಮಾನದಂಡಗಳು ಬದಲಾಗಬಹುದು. ಹೆಚ್ಚಿನ ಮಾಹಿತಿಗಾಗಿ, ನೀವು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಕರ್ನಾಟಕದ ಜಿಲ್ಲೆಗಳ ವೆಬ್‌ಸೈಟ್‌ಗಳಲ್ಲೂ ಜಿಲ್ಲಾ ಮಟ್ಟದ ಇಲಾಖೆಯ ಮಾಹಿತಿ ಲಭ್ಯವಿದೆ.
For More Updates Join our WhatsApp Group :
