ಕಾವೇರಿ ನೀರು ಬಿಡಲ್ಲ ಎಂದ ಕರ್ನಾಟಕ : ತಮಿಳುನಾಡು ಸಿಎಂ ಸ್ಟಾಲಿನ್ ಖಂಡನೆ

ಚೆನ್ನೈ: ತಮಿಳುನಾಡಿಗೆ ಕಾವೇರಿ ನೀರಿನ ಪ್ರಮಾಣ ಕಡಿಮೆ ಮಾಡಿರುವ ರ್ನಾಟಕ ಸರ್ಕಾರದ ನಿಲುವನ್ನು ತಮಿಳುನಾಡು ಸರ್ಕಾರ ಖಂಡಿಸಿದೆ. ಅಂತರ ರಾಜ್ಯ ನದಿ ವಿವಾದದಲ್ಲಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ನಿರ್ಧರಿಸಲು ನಾಳೆ ಸರ್ವ ಪಕ್ಷ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.

ಜುಲೈ 15ರ ಪ್ರಕಾರ, ಕರ್ನಾಟಕದ ನಾಲ್ಕು ಪ್ರಮುಖ ಅಣೆಕಟ್ಟುಗಳಲ್ಲಿ ಒಟ್ಟು 75. 586 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರೆ, ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ಕೇವಲ 13. 808 ಅಡಿ ನೀರಿದೆ ಎಂದು ಅವರು ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತದಲ್ಲಿನ ನೈರುತ್ಯ ಮುಂಗಾರು ಹಾಗೂ ಕರ್ನಾಟಕದ ಅಣೆಕಟ್ಟುಗಳಲ್ಲಿ ಒಳಹರಿವು ಹೆಚ್ಚಳ ಪರಿಗಣಿಸಿ ಈ ಮಾಸಾಂತ್ಯದವರೆಗೂ ಪ್ರತಿದಿನ ಒಂದು ಟಿಎಂಸಿ ಅಡಿ ಬಿಡುಗಡೆ ಮಾಡಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನಿರ್ದೇಶನ ನೀಡಿದೆ. ಆದರೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿರುವುದು ಆಘಾತಕಾರಿಯಾಗಿದೆ. ಈ ನಿರ್ದೇಶನವನ್ನು ಕೂಡಲೇ ಜಾರಿಗೊಳಿಸುವಂತೆ ಕೋರಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಸಮಿತಿ ಆದೇಶವನ್ನು ಕರ್ನಾಟಕ ಪಾಲಿಸದಿರುವುದು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

Leave a Reply

Your email address will not be published. Required fields are marked *