ಕರ್ನಾಟಕ : ಶಾಲೆಗಳಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ

ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು ಅವರ ಮಕ್ಕಳ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುವುದನ್ನು ನಿಷೇಧಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ದತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ. ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.

ಮಕ್ಕಳು ಕುಟುಂಬದಲ್ಲಿ ಬೆಳೆಯುವ ಬೇರೆ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಈ ಮಕ್ಕಳ ಹುಟ್ಟುಹಬ್ಬ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಯನ್ನು ಹೊರತು ಪಡಿಸಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರ ಹುಟ್ಟುಹಬ್ಬ ಆಚರಿಸುವುದನ್ನು ಈ ಮೂಲಕ ನಿಷೇಧಿಸಲಾಗಿದೆ

Leave a Reply

Your email address will not be published. Required fields are marked *