ಕರ್ನಾಟಕ ಸಾರಿಗೆ ನೌಕರರು ‘ಬೆಂಗಳೂರು ಚಲೋ’: ಬೇಡಿಕೆ ಈಡೇರದಿದ್ದರೆ ಮುಷ್ಕರ.

ಫ್ರಿಡಂ ಪಾರ್ಕ್‌ನಲ್ಲಿ ಪ್ರತಿಭಟನೆ, ಸರ್ವವ್ಯಾಪಿ ಸಿದ್ಧತೆ

ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆನೌಕರರು ಮತ್ತೆ ಡಿದೆದ್ದಿದ್ದು, ನಾಳೆ ‘ಬೆಂಗಳೂರು ಚಲೋ’ಗೆ ಕರೆ ನೀಡಲಾಗಿದೆ. ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ವರೆಗೆ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಯಲಿದ್ದು, ಕಳೆದ ವರ್ಷ ಆಗಸ್ಟ್ 5ರಂದು ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಆದರೆ ಈ ವರ್ಷದ ಆರಂಭದಲ್ಲೇ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ. ನಾಲ್ಕೂ ನಿಗಮಗಳ ವತಿಯಿಂದ ಪ್ರತಿಭಟನೆ ನಡೆಯಲಿದೆ.

ಬೇಡಿಕೆ ಈಡೇರದಿದ್ದರೆ ಮುಷ್ಕರಕ್ಕೆ ಸಿದ್ಧತೆ

ನಾಳೆ ಸಂಜೆ 4 ಗಂಟೆಯೊಳಗೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಲಿಲ್ಲ ಅಂದರೆ, ಸುದ್ದಿಗೋಷ್ಟಿ ಕರೆದು ಮುಷ್ಕರಕ್ಕೆ ಕರೆ ನೀಡಲು ಪ್ಲ್ಯಾನ್ ಮಾಡಲಾಗಿದೆ. ಇದಕ್ಕೆ ಬೇಕಿರುವ ಅಗತ್ಯ ಸಿದ್ಧತೆಗಳನ್ನೂ ಮುಖಂಡರು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ನೌಕರರಿಗೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎಂದು ಎಂಡಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ.

01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ 01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದಕ್ಕೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿಯು ಜನವರಿ 29ರ ಗುರುವಾರ ಬೆಂಗಳೂರು ಚಲೋಗೆ ಕರೆ ನೀಡಿದೆ. ಈ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಇಲಾಖೆ ಮುಂಜಾಗೃತೆ ಕೈಗೊಂಡಿದೆ. ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು ಎಂದು ಅಧಿಕಾರಿಗಳಿಗೆ ಎಂಡಿ ಖಡಕ್​​ ಸೂಚನೆ ನೀಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *