ವಿಜಯಪುರದಲ್ಲಿ 7°C ದಾಖಲೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಚಳಿಯ ಅಬ್ಬರ ಹೆಚ್ಚಾಗಿದೆ. ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದ್ದು, ವಿಜಯಪುರದಲ್ಲಿ 20 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. ವಿಜಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
10 ವರ್ಷಗಳಲ್ಲಿ ಎರಡನೇ ಬಾರಿ ಅತಿ ಕಡಿಮೆ ಉಷ್ಣಾಂಶ
ಬೆಂಗಳೂರಿನಲ್ಲಿ ಇತ್ತೀಚೆಗೆ 8 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿತ್ತು. ಇದೀಗ ವಿಜಯಪುರ ಜಿಲ್ಲೆಯ ಜನರು ಮೈಕೊರೆಯುವ ಚಳಿಯಿಂದ ತತ್ತರಿಸುತ್ತಿದ್ದು, ಕಳೆದ 20 ವರ್ಷಗಳಲ್ಲಿ ಮೂರನೇ ಬಾರಿ ಕನಿಷ್ಠ ತಾಪಮಾನ ದಾಖಲಾಗಿದೆ. 10 ವರ್ಷಗಳಲ್ಲಿ ಎರಡನೇ ಬಾರಿ ಅತಿ ಕಡಿಮೆ ಉಷ್ಣಾಂಶ ಕಂಡುಬಂದಿದೆ.
ಕಳೆದ ಡಿಸೆಂಬರ್ 13ರಂದು ತಾಪಮಾನ ಕೇವಲ 7 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿತ್ತು. ನಿನ್ನೆ (ಡಿ.16) ಕನಿಷ್ಠ 10.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್ಗೆ ತೆರಳದಂತೆ ಸಲಹೆ ನೀಡಿದ್ದಾರೆ.
For More Updates Join our WhatsApp Group :




