ಕರ್ನಾಟಕ ಹವಾಮಾನ ಅಪ್‌ಡೇಟ್.

ಕರ್ನಾಟಕ ಹವಾಮಾನ ಅಪ್‌ಡೇಟ್.

ಬೆಂಗಳೂರಿನಲ್ಲಿ ಚಳಿ–ಮಂಜು ಜೋಡಿ, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

ಬೆಂಗಳೂರು : ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಬೆಂಗಳೂರಿನಲ್ಲಿ ತೀವ್ರ ಚಳಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಉತ್ತರ ಕರ್ನಾಟಕದಲ್ಲೂ ಶೀತದಲೆಯ ಎಫೆಕ್ಟ್ ಜೋರಾಗಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕದಲ್ಲಿಂದು ಚಳಿಯ ಪ್ರಮಾಣ ಕಡಿಮೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಯಾವ ಜಿಲ್ಲೆಗಳಿಗೆ ಅಲರ್ಟ್​?

ಭಾನುವಾರ (ಡಿ.21) ವಿಜಯಪುರದಲ್ಲಿ 6.9 ಡಿಗ್ರಿ ಸೆಲ್ಸಿಯಲ್ಸ್ ಉಷ್ಣಾಂಶ ದಾಖಲಾಗಿತ್ತು.ಕಳೆದ 20 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮೂರನೇ ಬಾರಿಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ ಇದಾಗಿದೆ. ಆದರೆ ಇಂದು ಉತ್ತರ ಕರ್ನಾಟಕದಲ್ಲಿನ ತಾಪಮಾನದಲ್ಲಿ ಸುಧಾರಣೆ ಕಂಡಿದೆ. ನಿನ್ನೆ 5 ಕಡೆ ಯೆಲ್ಲೋ ಅಲರ್ಟ್​ ಇದ್ದರೆ, ಇಂದು ಕಲಬುರಗಿ ಮತ್ತು ಬೀದರ್​ನಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಇಂದು ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *