ಕರ್ನಾಟಕದ ಒಟ್ಟು ಸಾಲ: 8,24,389 ಕೋಟಿ ರೂ. – CM ಸಿದ್ದರಾಮಯ್ಯ ಮಾಹಿತಿ.

2026–27ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯದ ಆರ್ಥಿಕ ಸ್ಥಿತಿ, ಆದಾಯ ಹಾಗೂ ಉದ್ಯೋಗ ಸೃಷ್ಟಿ

ಬೆಂಗಳೂರು : 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ತೆರಿಗೆ ನೀತಿ ಬದಲಾವಣೆಗಳು ಮತ್ತು ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆಯಿಂದ ರಾಜ್ಯದ ಆದಾಯ ಸಂಗ್ರಹಣೆಗೆ ಸವಾಲುಗಳು ಎದುರಾಗಿವೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷ 10,000 ಕೋಟಿ ರೂಪಾಯಿ ಮತ್ತು ಮುಂದಿನ ವರ್ಷ 15,000 ಕೋಟಿ ರೂಪಾಯಿ ಕೊರತೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು ಸಾಲ 8,24,389 ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ತಿಳಿಸಿದ್ದು, ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಪಾಡಿಕೊಂಡು ಅಭಿವೃದ್ಧಿ ಮುಂದುವರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *