ಕಾಂಗ್ರೆಸ್ ಮುಖಂಡನ ಕೊ* ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಬಳಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗೋಪಾಲಕೃಷ್ಣ ನಾಯ್ಕ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮೊದಲು ರಾಡ್‌ನಿಂದ ಹಲ್ಲೆ ನಡೆಸಿದ ಬಳಿಕ, ಚಾಕುವಿನಿಂದ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ.
ಸದ್ಯ, ಗಂಭೀರ ಗಾಯಗೊಂಡಿರುವ ಗೋಪಾಲಕೃಷ್ಣ ನಾಯ್ಕರನ್ನು ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ದಾಳಿ ನಡೆಸಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಅಂಕೋಲ ಠಾಣೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ದಾಳಿಯ ಹಿಂದಿನ ಕಾರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲೂ ಆತಂಕ ಉಂಟುಮಾಡಿದೆ.
For More Updates Join our WhatsApp Group :




