ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ KEA

ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕೆಇಎ ವೆಬ್ಸೈಟ್ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 22ರವರೆಗೆ ಅವಕಾಶವಿರಲಿದೆ. ದಾಖಲೆಗಳು ಅವಧಿ ಮೀರಿದ್ದರೆ ಅರ್ಜಿ ಸಲ್ಲಿಸಲು ಅವಕಾಶವಿರಲ್ಲ ಎಂದು ಮೂಲಗಳು ತಿಳಿಸಿವೆ.

ಈ ಅರ್ಹತಾ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರಲಿದೆ. ಈ ಪರೀಕ್ಷೆಯಲ್ಲಿ ಕನಿಷ್ಠ 40 ಅಂಕಗಳನ್ನು ಗಳಿಸುವ ಮೂಲಕ ಅರ್ಹತೆ ಸಂಪಾದಿಸಬಹುದು. ರಾಜ್ಯದ ಪ್ರಮುಖ 11 ಕೇಂದ್ರದಲ್ಲಿ ಈ ಪರೀಕ್ಷೆ ನಡೆಯಲಿದೆ.

ಅಧಿಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ. ಒಟ್ಟು 41 ವಿಷಯದಲ್ಲಿ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಗರಿಷ್ಠ ವಯೋಮಿತಿ ಇಲ್ಲ.

ಸಾಮಾನ್ಯ ಅಭ್ಯರ್ಥಿಗಳು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 1000 ರೂ, ಮತ್ತು ಪರಿಶಿಷ್ಟ ಜಾತಿ, ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ 700 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಈ ಅರ್ಹತಾ ಪರೀಕ್ಷೆ ಕುರಿತು ಹೆಚ್ಚಿನ ವಿವರ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kea.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

Leave a Reply

Your email address will not be published. Required fields are marked *