ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೇಳಾಪಟ್ಟಿ ಬಿಡುಗಡೆಯನ್ನು ಬಿಡುಗಡೆ ಮಾಡಿದೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಅಧಿಸೂಚಿಸಿದ ಹುದ್ದೆಗಳಿಂದ ಆರಂಭವಾಗಿ, ಮೊನ್ನೆಯಷ್ಟೆ ಹೊರಡಿಸಲಾದ ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಸಹ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ, ಪೊಲೀಸ್ ಇಲಾಖೆಯ ಪೊಲೀಸ್ ಸಬ್ಇನ್ಸ್ಪೀಟರ್ಕ್ಟರ್, ಕಾಲೇಜು ಶಿಕ್ಷಣ ಇಲಾಖೆಯ ಕೆಸೆಟ್ ಪರೀಕ್ಷೆ, ರಾಯಚೂರು ವಿಶ್ವವಿದ್ಯಾಲಯವು ಇತ್ತೀಚೆಗೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಧಿಸೂಚಿಸಿದ್ದು, ಈ ಎಲ್ಲ ಹುದ್ದೆಗಳಿಗೆ ಪರಿಷ್ಕöÈತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
402 ಪೊಲೀಸ್ ಸಬ್‌ಇನ್ಸೆಪೆಕ್ಟರ್ ಹುದ್ದೆಗಳಿಗೆ ನೇಮಕ ಪರೀಕ್ಷೆಯನ್ನು ದಿನಾಂಕ:03-10-2024 ರಂದು ಗುರುವಾರ ನಡೆಸಲಾಗುತ್ತದೆ.
1೦೦೦ ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿ ಯ ವಿವಿಧ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಸೆಪ್ಟೆಂಬರ್ 29 ರಂದು ಮತ್ತು ಅಕ್ಟೋಬರ್ 26 ರಂದು ಪರೀಕ್ಷೆ ನಡೆಸಲಾಗುತ್ತದೆ.
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹತಾ ಪರೀಕ್ಷೆ – ಕೆಸೆಟ್ ಅನ್ನು ದಿನಾಂಕ:24-11-2024 ರಂದು ಪತ್ರಿಕೆ-1, ಪತ್ರಿಕೆ-2 ಪರೀಕ್ಷೆ ನಡೆಸಲಾಗುತ್ತದೆ.
ರಾಯಚೂರು ವಿಶ್ವವಿದ್ಯಾಲಯವು ಇತ್ತೀಚೆಗೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿತ್ತು. ಸದರಿ ಹುದ್ದೆಗಳಿಗೆ ಸಹ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಆಗಿದ್ದು ದಿನಾಂಕ: 24-11-2024 ರಂದು ಪರೀಕ್ಷೆ ನಡೆಯಲಿದೆ.
ಸೂಚನೆ:
ಈಗಾಗಲೇ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದವರು ದಿನಾಂಕ: 27-೦9-2024 ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗಿ, ಅರ್ಹತಾ ಅಂಕಗಳಿಸಿದವರಿಗೆ ಮಾತ್ರ ದಿನಾಂಕ: 27-10-2024 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಕೆಇಎ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್‌ಸೈಟ್ ಗೆ ಭೇಟಿ ನೀಡಬಹುದು.