ನವದೆಹಲಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಸಚಿವ ಶಿವನಾಂದ ಪಾಟೀಲ್ ಅವರ ನಡೆಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಶಿವಾನಂದ ಪಾಟೀಲ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡು ವಜಾಗೊಳಿಸಿದೆ. ವಿಚಾರಣೆ ವೇಳೆ, ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು, “ನಿಮ್ಮ ರಾಜಕೀಯ ಹೋರಾಟಗಳನ್ನು ನ್ಯಾಯಾಲಯದ ಹೊರಗೆ ಮಾಡಿ, ಇಲ್ಲಿಗೆ ತರಬೇಡಿ,” ಎಂದು ಖಾರವಾಗಿ ಹೇಳುವ ಮೂಲಕ ರಾಜಕೀಯ ಪ್ರಕರಣಗಳನ್ನು ನ್ಯಾಯಾಲಯಕ್ಕೆ ತರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಲೋಕಸಭೆ ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಯತ್ನಾಳ್ ನನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿವಾನಂದ ಪಾಟೀಲ್ ಅವರು, ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಶಿವಾನಂದ ಪಾಟೀಲ್ ಅವರು ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದರೆ, ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈ ಮೊಕದ್ದಮೆಯನ್ನು ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಾಟೀಲ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು
For More Updates Join our WhatsApp Group :