ಹೊಸ ವರ್ಷಕ್ಕೆ ಖಾಕಿ ಕಟ್ಟುನಿಟ್ಟು.

ಹೊಸ ವರ್ಷಕ್ಕೆ ಖಾಕಿ ಕಟ್ಟುನಿಟ್ಟು.

ಹುಡುಗಿಯರ ಮೇಲೆ ಕಿರುಕುಳಕ್ಕೆ ಜೋಕೆ: ಪೊಲೀಸ್ ಎಚ್ಚರಿಕೆ.

ಬೆಳಗಾವಿ : ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ ಅವಘಡಗಳನ್ನು ತಪ್ಪಿಸಲು ಅಗತ್ಯ ಕ್ರಮವನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಆದೇಶಿಸಲಾಗಿದೆ. ನಗರದಲ್ಲಿ 1000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, KSRP, CAR ತುಕಡಿಗಳು ಮತ್ತು ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಮುಖ್ಯವಾಗಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಯಾವುದೇ ರೀತಿಯ ಕಿರುಕುಳ ನಡೆದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *