C.M ಬದಲಾವಣೆ ಗೊಂದಲಕ್ಕೆ ಖರ್ಗೆ ಸ್ಪಷ್ಟನೆ.!

C.M ಬದಲಾವಣೆ ಗೊಂದಲಕ್ಕೆ ಖರ್ಗೆ ಸ್ಪಷ್ಟನೆ.!

ರಾಜ್ಯದ ನಾಯಕತ್ವ ಬದಲಾವಣೆ ಅಥವಾ ಸಿಎಂ ಆಯ್ಕೆ ವಿಷಯದಲ್ಲಿ ನಿರ್ಧಾರ.!

ಕಲಬುರಗಿ: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ರಾಜ್ಯದ ನಾಯಕತ್ವ ಬದಲಾವಣೆ ಅಥವಾ ಸಿಎಂ ಆಯ್ಕೆ ವಿಷಯದಲ್ಲಿ ನಿರ್ಧಾರವು ಪಕ್ಷದ ಉನ್ನತ ಮಟ್ಟದಲ್ಲಿ ಮಾತ್ರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದು, ಬದಲಾವಣೆ ಅಗತ್ಯವಿದ್ದರೆ ಅದನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಕ್ಷದ ನಾಯಕರು ಸೇರಿ ನಿರ್ಧರಿಸುತ್ತಾರೆ ಎಂದು ಖರ್ಗೆ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಶಾಸಕರು ದೆಹಲಿಗೆ ತೆರಳುತ್ತಿದ್ದಾರೆ ಎಂಬ ಹೇಳಿಕೆಯನ್ನು ಖರ್ಗೆ ತಳ್ಳಿ ಹಾಕಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಹರಿದಾಡುತ್ತಿರುವ ಗೊಂದಲಗಳನ್ನು ಶೀಘ್ರದಲ್ಲೇ ಸ್ಪಷ್ಟಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *