ಸಚಿವ ಕೆಎನ್ ರಾಜಣ್ಣ ರಾಜೀನಾಮೆ | KN Rajanna Resigns from Cabinet

KN Rajanna Resigns from Cabinet

ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ.

ರಾಜೀನಾಮೆ ಬಗ್ಗೆ ಸಚಿವ ಕೆಎನ್​ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *