ತುಮಕೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಚಿವ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನ ವಜಾಗೊಳಿಸಲಾಗಿದೆ. ರಾಜಣ್ಣ ಮೇಲಿನ ದಿಢೀರ್ ಕ್ರಮ ಕಾಂಗ್ರೆಸ್ ವಲಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಮಧುಗಿರಿಯಲ್ಲಿ ರಾಜಣ್ಣ ಬೆಂಬಲಿಗರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಮಧುಗಿರಿ ಬಂದ್ಗೆ ಕರೆ ನೀಡಿದ್ದಾರೆ. ಪ್ರತಿಭಟನೆ ವೇಳೆ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ್ದಾನೆ.
ರಾಜಣ್ಣ ಬೆಂಬಲಿಗರ ಆಕ್ರೋಶ, ಮಧುಗಿರಿ ಬಂದ್
ರಾಜಣ್ಣ ಅವರನ್ನು ವಜಾಗೊಳಿಸಿ ಕ್ರಮವನ್ನ ಬೆಂಬಲಿಗರು ಖಂಡಿಸಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕಾಂಗ್ರೆಸ್ ಮುಖಂಡರು ಇಂದು ಬಂದ್ಗೆ ಕರೆ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಸ್ವಯಂಪ್ರೇರಿತ ಬಂದ್ ಆಚರಿಸಲು ಸೂಚನೆ ನೀಡಲಾಗಿದೆ. ಇದು ತುಮಕೂರು ಜಿಲ್ಲೆಗೆ ಆದ ದೊಡ್ಡ ಅನ್ಯಾಯ ಎಂದು ಅವರು ಹೇಳಿದ್ದಾರೆ.
ಉಗ್ರ ಹೋರಾಟದ ಎಚ್ಚರಿಕೆ
ಕೂಡಲೇ ಸಿಎಂ ಮರಪರಿಶೀಲಿಸಿ ಸರಿಪಡಿಸುವಂತೆ ಮುಖಂಡರು ಆಗ್ರಹಿಸಿದ್ದಾರೆ. ಮಧುಗಿರಿಯ ಎಲ್ಲಾ ಅಂಗಡಿ, ಮುಂಗಟ್ಟು ಬಂದ್ ಮಾಡಲು ತೀರ್ಮಾನಿಸಲಾಗಿದೆ. ಇದು ಪ್ರಾರಂಭವಷ್ಟೆ, ಮುಂದೆ ಇನ್ನು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಎಂಕೆ ನಂಜುಂಡರಾಜು ಹೇಳಿದ್ದಾರೆ.
ರಾಜಣ್ಣ ಪರ ಪ್ರತಿಭಟನೆ
ಮಧುಗಿರಿಯಲ್ಲಿ ರಾಜಣ್ಣ ಪರ ಪ್ರತಿಭಟನೆ ಜೋರಾಗಿದೆ ಬೆಂಬಲಿಗರು ಬಸ್ ತಡೆಯುವ ಮೂಲಕ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜಣ್ಣ ಅವರ ಫೋಟೊ ಹಿಡಿದು ಬಸ್ ಕೆಳಗೆ ಮಲಗಿ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡರ ಸಭೆ
ರಾಜಣ್ಣ ಅವರ ಭಾವಚಿತ್ರ ಹಿಡಿದ ಪ್ರತಿಭಟನಾ ಮೆರವಣಿಗೆ ನಡೆದಿದ್ದು, KN ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. KN ರಾಜಣ್ಣ ಅವರ ಆಪ್ತ ವಲಯದಲ್ಲಿ ಆಕ್ರೋಶ ತಾರಕಕ್ಕೇರಿದ್ದು, ಕಾಂಗ್ರೆಸ್ ಮುಖಂಡರ ಸಭೆ ಆಯೋಜಿಸಲಾಗಿದೆ.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH