ಕೋಲಾರ || ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ನಿಂದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ,

ಕೋಲಾರ || ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ನಿಂದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ,

ಕೋಲಾರ: ಕೇಂದ್ರದ ಬಿಜೆಪಿ ಸರ್ಕಾರವು ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ಬೆಲೆ ಹೆಚ್ಚಳ ಮಾಡಿರುವ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರಿದ್ ರವರ ನೇತೃತ್ವದಲ್ಲಿ ಶುಕ್ರವಾರ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು,

ಈ ಸಂದರ್ಭದಲ್ಲಿ ಸೈಯದ್ ಆಫ್ರೀದ್ ಮಾತನಾಡಿ ಬಿಜೆಪಿ ಸರ್ಕಾರವು ಜನಸಾಮಾನ್ಯರ ವಿರೋಧಿ ಸರ್ಕಾರವಾಗಿದೆ ಅಡುಗೆ ಅನಿಲ ಸಿಲಿಂಡರ್‌, ಪೆಟ್ರೋಲ್, ಡೀಸೆಲ್‌ ದರ ಹೆಚ್ಚಳದಿಂದ ಬಡವರ ಗಾಯದ ಮೇಲೆ ಬರೆ ಎಳೆದಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಿದ್ದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕೇಂದ್ರವು ತಕ್ಷಣವೇ ಪೆಟ್ರೋಲ್‌, ಡೀಸೆಲ್‌ ದರ ಇಳಿಸಿ ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಬಿಜೆಪಿ ಸರ್ಕಾರವು ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ. ಅದನ್ನು ಬಿಜೆಪಿ ವಿರೋಧಿಸಿ ಹೋರಾಟ ಮಾಡಬೇಕು. ಬದಲಾಗಿ ಜನಾಕ್ರೋಶ ಯಾತ್ರೆ ಮಾಡುತ್ತಿದೆ. ಜನಾಕ್ರೋಶ ಯಾತ್ರೆಯ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಜನರಿಗೆ ಯಾರು ಬೆಲೆ ಏರಿಕೆ ಮಾಡಿದ್ದಾರೆ ಎಂಬುದು ಗೊತ್ತು ಅದಕ್ಕೆ ಕೇಂದ್ರದ ವಿರುದ್ದ ಈಗಾಗಲೇ ಬೇಸರ ಹೊರ ಹಾಕುತ್ತಿದ್ದಾರೆ ಬಿಜೆಪಿಗೆ ನೈತಿಕತೆ ಇದ್ದರೆ ಮೊದಲು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಿ ಕರ್ನಾಟಕಕ್ಕೆ ಶಂಭು ಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದರು,

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ದುರಾಡಳಿತ ಬೆಲೆ ಏರಿಕೆಗೆ ಕಾರಣವಾಗಿದೆ. ಕೇಂದ್ರ ಉದ್ಯಮಿಗಳ ಹಿತಾಸಕ್ತಿ ಕಾಪಾಡುವಲ್ಲಿ ನಿರತವಾಗಿದೆ. ಜನಸಾಮಾನ್ಯರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಜನವಿರೋಧಿ ನಡೆಯನ್ನು ಯುವಜನರು ಖಂಡಿಸಬೇಕು. ಕಾಂಗ್ರೆಸ್‌ ಯುವ ಘಟಕದ ಪದಾಧಿಕಾರಿಗಳು ಜನರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್  ರಾಜ್ಯ ಪ್ರಧಾನ ಕಾರ್ಯದರ್ಶಿ ಭರತ್,  ಜಿಲ್ಲಾ ಉಪಾಧ್ಯಕ್ಷರಾದ ವಾಸುದೇವರೆಡ್ಡಿ, ತೌಫೀಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಮ್ರಾನ್ ಪಾಷ, ಸಕ್ಲೈನ್, ಷಮ್ಸ್ , ಸಿದ್ದೀಕ್ ತಾಲೂಕು ಅಧ್ಯಕ್ಷ ಸುಹೈಲ್, ನಗರ ಅಧ್ಯಕ್ಷ‌ ಅರ್ಬಾಜ್, ಅಭೀಷೇಕ್, ಮುಸ್ತಫಾ, ಅಬುಬಕರ್ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *