Kolkata Rape and Murder: ‘ಸಾಮೂಹಿಕ ಅತ್ಯಾಚಾರವಲ್ಲ’: CBI ಸ್ಪಷ್ಟನೆ

ಕೋಲ್ಕತಾ: ಪಶ್ಚಿಮ ಬಂಗಾಳಗ ಆರ್ ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನಡೆದಿದೆ ಎಂದು ಹೇಳಲಾದ ಸಾಮೂಹಿಕ ಅತ್ಯಾಚಾರ ಆರೋಪವನ್ನು CBI ತಳ್ಳಿ ಹಾಕಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳವು ವೈದ್ಯೆಯ ಸಾವಿನಲ್ಲಿ ಸಾಮೂಹಿಕ ಅತ್ಯಾಚಾರ ಆರೋಪ ತಳ್ಳಿಹಾಕಿದೆ.

ಲಭ್ಯವಿರುವ ಪುರಾವೆಗಳ ಆಧಾರದಲ್ಲಿ ಸಂಜಯ್ ರಾಯ್ ನನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ಆತ ಮಾತ್ರ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂದು CBI ಮೂಲಗಳು ತಿಳಿಸಿವೆ.

ಈ ಪ್ರಕರಣದ ತನಿಖೆಯು “ಅಂತಿಮ ಹಂತ”ದಲ್ಲಿದೆ ಎಂದು ಮೂಲಗಳು ತಿಳಿಸಿದ್ದು, ಶೀಘ್ರದಲ್ಲೇ ತಮ್ಮ ವರದಿ ಮತ್ತು ಚಾರ್ಜ್ ಶೀಟ್ ದಾಖಲಿಸಲು ಸಿಬಿಐ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಅಂದಹಾಗೆ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಈ ಪ್ರಕರಣವನ್ನು ಕೋಲ್ಕತ್ತಾ ಹೈಕೋರ್ಟ್ CBIಗೆ ವಹಿಸಿತ್ತು. ಅಲ್ಲದೆ ಪ್ರಕರಣದಲ್ಲಿನ ತನಿಖಾ ವಿಳಂಬದ ಕುರಿತು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

Leave a Reply

Your email address will not be published. Required fields are marked *