ಕೊಪ್ಪಳ : ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಬಳಿ ಸಂಭವಿಸಿದೆ. ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ವೈಭವ್ (9) ಮೃತಪಟ್ಟ ಬಾಲಕ. ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ಹೊರಟಿದ್ದ ಖಾಸಗಿ ಬಸ್, ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ ಎಂಬುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಗಾಯಾಳುಗಳಿಗೆ ಯಲಬುರ್ಗಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಪ್ಪಳ || ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಸಾವು, ಐವರಿಗೆ ಗಂಭೀರ ಗಾಯ
