ಕೊರಟಗೆರೆ : 9 ನೇ ತರಗತಿಯ ವಿದ್ಯಾರ್ಥಿನಿಯನ್ನು ವ್ಯಕ್ತಿಯೋರ್ವ ಬಲಾತ್ಕರಿಸಿ ಗರ್ಭಿಣಿಯನ್ನಾಗಿಸಿದ ಹಿನ್ನೆಲೆಯಲ್ಲಿ ಆತನ ವಿರುದ್ದ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಘಟನೆ ಜರುಗಿದೆ.
ಕುರಂಕೋಟೆ ಗ್ರಾಮದ ಲೋಕೇಶ್ (48) ಎಂಬಾತ 9 ನೇ ತರಗತಿ ವಿದ್ಯಾರ್ಥಿನಿಯನ್ನು ಆಕೆಯ ಮನೆಯವರು ಇಲ್ಲದಿರುವ ಸಂದರ್ಭ ಬಲಾತ್ಕರಿಸಿ 6 ತಿಂಗಳ ಗರ್ಭಿಣಿಯನ್ನಾಗಿಸಿದ್ದಾನೆ. ಯಾರಿಗೂ ಹೇಳದಂತೆ ಭಯ ಮೂಡಿಸಿದ ಕಾರಣ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಸಂಬಂಧ ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಸಿಪಿಐ ಅನಿಲ್ ಕುಮಾರ್ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.