ಹಾವೇರಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆ*ಕಿ.!

ಹಾವೇರಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆ*ಕಿ.!

ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಸುರಕ್ಷಿತ.!

ಹಾವೇರಿ : ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಪಲ್ಲಕ್ಕಿ ಬಸ್‌ನಲ್ಲಿ ಈ ಅವಘಡ ಸಂಭವಿಸಿದೆ.ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಪಕ್ಕೀರಪ್ಪ ಎಚ್ಚೆತ್ತುಕೊಂಡು ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿದರು. ಬಳಿಕ ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಯುವಂತೆ ಸೂಚಿಸಿದರು.

ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 17 ಮಂದಿ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ದೊಡ್ಡ ದುರಂತ ತಪ್ಪಿದಂತಾಗಿದೆ.ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಯಿತು. ಸಾರಿಗೆ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ. ಘಟನಾ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *