ಕುಣಿಗಲ್ : ಹದಿನಾರು ವರ್ಷದ ಅಪ್ರಾಪ್ತ ಮಗಳ ಮೇಲೆ ತಂದೆಯೆ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಅಮೃತೂರು ಪೊಲೀಸರು ಬಂಧಿಸಿದ್ದಾರೆ.
ಕೆಲಸ ನಿಮಿತ್ತ ಹೆಂಡತಿ ಬೇರೆ ಊರಿಗೆ ತೆರಳಿದ್ದ ವೇಳೆಯಲ್ಲಿ ತಾಲೂಕಿನ ಹೆಸರಾಂತ ಹೋಟೆಲ್ ಮಾಲೀಕ ಓರ್ವನು ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಹೀನಾಯ ಕೃತ್ಯ ನಡೆದಿದೆ. ಈ ಸಂಬAಧ ಪತ್ನಿ ನೀಡಿದ ದೂರಿನ ಮೇರೆಗೆ ಅಮೃತೂರು ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.