ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್ನಲ್ಲಿ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಅವರು ಈ ಬೆಂಕಿ ಅಪಘಾತದ ಬಗ್ಗೆ ನಿಖರವಾದ ಮಾಹಿತಿ ನೀಡಿದ್ದಾರೆ.
ಇಂದು ಬೆಂಕಿ ಅವಘಡಕ್ಕೆ ತುತ್ತಾದ ಬಸ್ನಲ್ಲಿ ಪ್ರಯಾಣಿಸುತ್ತಿದ್ದವರ ಅಧಿಕೃತ ಮಾಹಿತಿ ಲಭ್ಯವಾಗಿದೆ. ಒಟ್ಟು ಪ್ರಯಾಣಿಕರ ಸಂಖ್ಯೆ 46. ಅವರಲ್ಲಿ 39 ಜನ ಹಿರಿಯ ಪ್ರಯಾಣಿಕರು, 4 ಜನ ಮಕ್ಕಳು, 2 ಚಾಲಕರು ಸೇರಿ 45 ಜನರು ಬಸ್ನಲ್ಲಿದ್ದರು. ಆದರೆ, ಮಾರ್ಗ ಮಧ್ಯೆ ಓರ್ವ ಅಪರಿಚಿತ ಪ್ರಯಾಣಿಕ ಬಸ್ ಹತ್ತಿಕೊಂಡಿದ್ದ. ಹೀಗಾಗಿ, ಬಸ್ನಲ್ಲಿದ್ದ 45 ಜನರ ಗುರುತು ಪತ್ತೆಯಾಗಿದೆ. ಆದರೆ, ಉಳಿದ ಓರ್ವನ ಮಾಹಿತಿ ಸಿಕ್ಕಿಲ್ಲ. ಈ ಪೈಕಿ 18 ಹಿರಿಯ ಪ್ರಯಾಣಿಕರು, 2 ಮಕ್ಕಳು ಸೇರಿ 20 ಜನ ಸಾವನ್ನಪ್ಪಿದ್ದಾರೆ.
ಬೆಂಕಿ ಅವಘಡಕ್ಕೆ ಕಾರಣ:
ಹೈದರಾಬಾದ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತದ ವಿಚಾರ ತಿಳಿದು ತುಂಬಾ ನೋವಾಗಿದೆ. ಬೈಕ್ಗೆ ಬಸ್ ಡಿಕ್ಕಿ ಹೊಡೆದ ದುರಂತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿದಂತೆ 20 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬೈಕ್ ಸವಾರ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೆಲವರು ಗುರುತು ಸಿಗದ ರೀತಿಯಲ್ಲಿ ಸುಟ್ಟುಹೋಗಿದ್ದಾರೆ. ಹೀಗಾಗಿ ಡಿಎನ್ಎ ಪರೀಕ್ಷೆ ನಡೆಸಿ ಮೃಹದೇಹ ಹಸ್ತಾಂತರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಆಂಧ್ರದ ಗೃಹ ಸಚಿವೆ ಅನಿತಾ ಮಾಹಿತಿ ನೀಡಿದ್ದಾರೆ.
ವಿಧಿವಿಜ್ಞಾನ ಪ್ರಯೋಗಾಲಯದ 16 ತಂಡದಿಂದ ಮಾದರಿ ಸಂಗ್ರಹಿಸಲಾಗುತ್ತಿದೆ. ಸದ್ಯ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಸ್ ದುರಂತದ ಬಗ್ಗೆ ತನಿಖೆಗೆ 4 ವಿಶೇಷ ತಂಡ ರಚಿಸಲಾಗುವುದು ಎಂದು ಕರ್ನೂಲ್ನಲ್ಲಿ ಆಂಧ್ರದ ಗೃಹ ಸಚಿವೆ ವಂಗಲಪುಡಿ ಅನಿತಾ ಹೇಳಿದ್ದಾರೆ.
For More Updates Join our WhatsApp Group :




