ಅಧಿಕಾರ ಹಂಚಿಕೆ ಗೊಂದಲಕ್ಕೆ ಹೊಸ ತಿರುವು.
ಬೆಂಗಳೂರು: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಕಾವೇರಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ತಂತ್ರ, ರಣತಂತ್ರ ಜೋರಾಗೇ ನಡೆಯುತ್ತಿವೆ. ಇದರ ಮಧ್ಯೆ ದಲಿತ ಸಿಎಂ ಕೂಗು ಕೇಳಿಬಂದಿದ್ದು, ಮೊನ್ನೇ ಅಷ್ಟೇ ದಲಿತ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಗೊಂದಲ ಪರಿಹರಿಸಿ ಮುಂದಿನ ನಾಯಕತ್ವ ನಿರ್ಧರಿಸಿ ಎನ್ನುವ ಮನವಿ ಮಾಡಿದ್ದಾರೆ. ಈ ಅಧಿಕಾರ ಹಸ್ತಾಂತರದ ರಾಜಕೀಯ ಚಟುವಟಿಕೆಗಳ ನಡುವೆ ಸಂಪುಟ ಪುನಾರಚನೆ ಕೂಗು ಕೇಳಿಬಂದಿದೆ. ಮೊದಲ ಬಾರಿಗೆ ಗೆದ್ದಿರುವ ಕಾಂಗ್ರೆಸ್ನ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದು, ಸಂಪುಟ ವಿಸ್ತರಣೆ ಮಾಡಿ, ನಮಗೂ ಅವಕಾಶ ಕೊಡಿ ಎಂದು ಧ್ವನಿ ಎತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಕರ್ನಾಟಕ ಪ್ರವಾದಲ್ಲಿರುವಾಗಲೇ ಸಂಪುಟ ಪುನರ್ ರಚನೆ ದಾಳ ಉರುಳಿಸಿದ್ದು, ಭಾರೀ ಸಂಚಲನ ಮೂಡಿಸಿದೆ.
ಶಾಸಕರು ಬರೆದಿರುವ ಪತ್ರದ ಸಾರಾಂಶ
ಕಾಂಗ್ರೆಸ್ನಿಂದ ಮೊದಲ ಬಾರಿ 38 ಶಾಸಕರು ಆಯ್ಕೆಯಾಗಿದ್ದಾರೆ. ಈ ಮೂಲಕ ಯುವಕರ ಅವಶ್ಯಕತೆ ಇದೆ ಎಂದು ಜನ ಹೇಳಿದ್ದಾರೆ. ಮೊದಲ ಬಾರಿ ಗೆದ್ದವರಿಗೆ ಸಚಿವ ಸ್ಥಾನ ನೀಡಿ ಜನಾದೇಶಕ್ಕೆ ಮನ್ನಣೆ ನೀಡಿ. ಯುವಕರಿಗೆ ಅವಕಾಶ ನೀಡುವುದು ಈ ಕ್ಷಣದ ಬೇಡಿಕೆಯಾಗಿದೆ. ಮೊದಲ ಬಾರಿ ಗೆದ್ದಿರುವ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಿ. ಬೇರೆ ಸರ್ಕಾರದಲ್ಲಿ ಮೊದಲ ಬಾರಿ ಶಾಸಕರು ಸಿಎಂ ಆಗಿದ್ದಾರೆ. ಹೊಸಬರಿಗೆ ಅವಕಾಶ ನೀಡಿದ್ರೆ ಮುಂದಿನ ಚುನಾವಣೆ ಗೆಲ್ಲಲು ಸಹಕಾರಿಯಾಗಲಿದೆ. ಪಕ್ಷ ನಿಷ್ಠೆ, ಸೈದ್ದಾಂತಿಕವಾಗಿ ಗಟ್ಟಿಯಾಗಿರುವವರಿಗೆ ಅವಕಾಶ ನೀಡಿ ಎಂದು ಶಾಸಕರು ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ.
For More Updates Join our WhatsApp Group :




