ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬೆನ್ನಲ್ಲೇ ನಟ ಜಗ್ಗೇಶ್ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿರುವ ನಟ ಜಗ್ಗೇಶ್ ”ಸರ್ವಆತ್ಮಾನೇನಬ್ರಹ್ಮ ಸರ್ವ ಜೀವಿಯಲ್ಲಿ ದೇವರಿದ್ದಾನೆ, ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ!

ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ ಅವನ ಪಾಪಕರ್ಮ ಅವನ ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲಾ ಎಲ್ಲಾ ಕರ್ಮಕ್ಕು ತತಕ್ಷಣ ಪಲಿತಾಂಶ ಉಂಟು! ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲಾ!” ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.




