ಧಾರವಾಡ ಕೇಂದ್ರ ಜೈಲಿನಲ್ಲಿ ಜೀವಾವಧಿ ಶಿಕ್ಷಿತನ ಆತ್ಮಹ*.

ಧಾರವಾಡ ಕೇಂದ್ರ ಜೈಲಿನಲ್ಲಿ ಜೀವಾವಧಿ ಶಿಕ್ಷಿತನ ಆತ್ಮಹ*.

ಪತ್ನಿ ಕೊ* ಆರೋಪಿಯಾಗಿದ್ದ ಈಶ್ವರಪ್ಪ ಪೂಜಾರ್ ನೇಣು ಬಿಗಿದುಕೊಂಡು ಸಾವನ್ನಪ್ಪಿದರು.

ಧಾರವಾಡ: ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಹೇಳಲಾಗಿದೆ. ಸುಮಾರು ಏಳು ವರ್ಷಗಳ ಹಿಂದೆ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ತಮ್ಮ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಜೈಲಿನಲ್ಲೇ ಅನುಭವಿಸಿದ್ದಾರೆ. ಈಶ್ವರಪ್ಪ ಪೂಜಾರ್ ಅವರು ಜೈಲಿನ ಆವರಣದಲ್ಲಿರುವ ನಿರ್ಮಾಣ ಕಟ್ಟಡದ ಸ್ಥಳದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಜೈಲಿನಲ್ಲಿ ಕೆಲಸ ಮುಗಿಸಿದ ನಂತರ ಈಶ್ವರಪ್ಪ ಪೂಜಾರ್ ಸೇಲ್​​ಗೆ ಬಂದಿಲ್ಲ. ನಂತರ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ನಿರ್ಮಾಣ ಕಟ್ಟಡದ ಬಳಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಆಸ್ಪತ್ರೆ ಸಾಗಿಸಲಾಗಿದ್ದು, , ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರು ಯಾವ ಕಾರಣಕ್ಕೆ ಈ ನಿರ್ಧಾರ ಯಾವ ಕಾರಣಕ್ಕೆ ತೆಗೆದುಕೊಂಡರು ಎಂದು ತಿಳಿದು ಬಂದಿಲ್ಲ. ಈ ಪ್ರಕರಣದ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನು ಕಟ್ಟಡ ನಿರ್ಮಾಣಕ್ಕೆಂದು ಅಲ್ಲಿ ಬಳಸಲಾಗಿದ್ದ ಹಗ್ಗದಿಂದಲ್ಲೇ ನೇಣು ಬಿಗಿದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಕೈದಿಗಳ ಕೆಲಸ ಮುಗಿದ ನಂತರ ಕೈದಿಗಳನ್ನು ಸೇಲ್​ಗೆ ಕರೆದುಕೊಂಡು ಬರುವ ಜವಾಬ್ದಾರಿಯನ್ನು ಅಲ್ಲಿ ಸಿಬ್ಬಂದಿಗಳಿಗೆ ನೀಡಲಾಗಿತ್ತು. ಆದರೆ ಈ ಜವಾಬ್ದಾರಿಯನ್ನು ನಿಭಾಯಿಸಲು ಅಧಿಕಾರಿಗಳು ವಿಫಲಗಿದ್ದಾರೆ ಎಂದು ಅವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಕಾರಾಗೃಹದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂಜಾರ್ ಜೈಲಿನಲ್ಲಿ ಉತ್ತಮ ನಡವಳಿಕೆ ಕೂಡ ಇತ್ತು. ಅವರ ಆ ನಡುವಳಿಕೆ ಮೇಲೆ ಅವರನ್ನು ಕೂಡ ಬಿಡಗುಡೆ ಮಾಡುವ ಯೋಚನೆ ಕೂಡ ಇತ್ತು ಎಂದು ಹೇಳಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *