ಕೇಳಿ ಇಲ್ಲಿ, ಮೂಲಂಗಿ ಎಂದಾಕ್ಷಣ ಮುಖ ಸಿಂಡರಿಸಬೇಡಿ! ಪ್ರಯೋಜನ ಕೇಳಿದ್ರೆ ಶಾಕ್ ಆಗ್ತೀರಾ.?

ಮೂಲಂಗಿ ಎಂದಾಕ್ಷಣ ಮುಖ ಸಿಂಡರಿಸಬೇಡಿ! ಪ್ರಯೋಜನ ಕೇಳಿದ್ರೆ ಶಾಕ್ ಆಗ್ತೀರಾ.?

ಮೂಲಂಗಿ

ಮೂಲಂಗಿ ನೋಡಿದರೆ ಮೂಗು ಮುರಿಯುವವರೇ ಹೆಚ್ಚಾಗಿದ್ದಾರೆ. ಮೂಲಂಗಿ ವಾಸನೇ ಹೆಚ್ಚಿನವರಿಗೆ ಇಷ್ಟವಾಗುವುದಿಲ್ಲ. ಆದರೆ ಮೂಲಂಗಿ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವ ವಿಚಾರ ಎಷ್ಟೋ ಜನರಿಗೆ ತಿಳಿದಿರುವುದಿಲ್ಲ. ನಾರಿನಂಶ ಮತ್ತು ವಿಟಮಿನ್ ಅಧಿಕವಿದ್ದು, ಮಲಬದ್ಧತೆ ಮತ್ತು ಮಲವ್ಯಾಧಿಯಂತಹ ಕಾಯಿಲೆಗಳನ್ನು ಗುಣಪಡಿಸಲು ಮೂಲಂಗಿ ಸಹಕಾರಿಯಾಗಿದೆ.

•          ಹಸಿ ಮೂಲಂಗಿಯನ್ನು ತುರಿದು ಉಪ್ಪು ಮತ್ತು ನಿಂಬೆರಸ ಸೇರಿಸಿ ತಿಂದರೆ ನೆಗಡಿ ನಿವಾರಣೆಯಾಗುತ್ತದೆ.

•          ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ದೇಹದಲ್ಲಿ ರಕ್ತ ಸಂಚಾರ ಸರಿಯಾಗಿ ನಡೆಯುವಂತೆ ಮಾಡುತ್ತದೆ.

•          ಮೂಲಂಗಿ ಸೊಪ್ಪಿನ ರಸವನ್ನು ಸೇವಿಸಿದರೆ ಮೂತ್ರ ಕಟ್ಟಿಕೊಳ್ಳುವ ಸಮಸ್ಯೆ ಇದ್ದರೆ ನಿವಾರಣೆಯಾಗುತ್ತದೆ.

•          ಹಸಿ ಮೂಲಂಗಿ ಹಾಕಿ ಸಲಾಡ್ ಮಾಡಿ ತಿಂದರೆ ಮೂಲವ್ಯಾಧಿ ಸಮಸ್ಯೆ ಕಡಿಮೆಯಾಗುವುದು.

•          ಮೂಲಂಗಿ ಎಲೆಗಳಲ್ಲಿ ಸಾಕಷ್ಟು ಪ್ರಮಾಣದ ಫೈಬರ್ ಕಂಡುಬರುತ್ತದೆ. ಮೂಲಂಗಿ ಎಲೆಗಳಿಂದ ತಯಾರಿಸಿದ ಜ್ಯೂಸ್ ಸೇವಿಸಿದರೆ ಜೀರ್ಣಕ್ರಿಯೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳ ಬಹುದಾಗಿದೆ.

•          ತೂಕ ಇಳಿಸಿಕೊಳ್ಳಲು ಬಯಸಿದರೆ, ಮೂಲಂಗಿ ಎಲೆ ಎಲ್ಲರಿಗೂ ಉತ್ತಮ ಆಯ್ಕೆಯಾಗಿದೆ. ಹೌದು, ಮೂಲಂಗಿ ಎಲೆಗಳಿಂದ ತಯಾರಿಸಿದ ಜ್ಯೂಸ್ ಸೇವಿಸುವ ಮೂಲಕ ನೀವು ಸುಲಭವಾಗಿ ತೂಕವನ್ನು ಕಡಿಮೆ ಮಾಡಬಹುದು

•          ಮೂಲಂಗಿಯಲ್ಲಿರುವ ವಿಟಿಮಿನ್ ಸಿ ನಮ್ಮ ದೇಹದಲ್ಲಿ ರಕ್ತ ಕಣಗಳನ್ನು ಹೆಚ್ಚಿಸುವುದಲ್ಲದೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

•          ಮೂಲಂಗಿ ಸೇವಿಸಿದರೆ ಬೇಗ ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಅಂದರೆ ಅದು ದೇಹದ ತೂಕವನ್ನು ನಿಯಂತ್ರಿಸುತ್ತದೆ. ತೆಳ್ಳಗಾಗಬೇಕು ಎಂದು ಬಯಸಿದವರು ಮೂಲಂಗಿ ಸೇವಿಸಿ.

•          ಹಸಿ ಮೂಲಂಗಿಗೆ ಸ್ವಲ್ಪ ಉಪ್ಪು, ಕಾಳು ಮೆಣಸು ಮತ್ತು ನಿಂಬೆರಸ ಸೇರಿ ಊಟವಾದ ನಂತರ ಸೇವಿಸಿದರೆ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.

•          ಮೂತ್ರಕೋಶ ಮತ್ತು ಮೂತ್ರಪಿಂಡವನ್ನು ಶುಚೀಕರಿಸಲು ಸಹಕಾರಿ ಮೂಲಂಗಿ. ಇದನ್ನು ಯಥೇಚ್ಚವಾಗಿ ಸೇವನೆ ಮಾಡಿದರೆ ಉರಿಮೂತ್ರ ಮುಂತಾದ ಮೂತ್ರ ಸಂಬಂಧಿ ಕಾಯಿಲೆಗಳಿಂದ ಮುಕ್ತರಾಗಬಹುದು.

ಮೂಲಂಗಿ ಜ್ಯೂಸ್ ಮಾಡುವುದು ಹೇಗೆ?: ಮೂಲಂಗಿ ಎಲೆಗಳನ್ನು ನೀರಿನಿಂದ ಚೆನ್ನಾಗಿ ತೊಳೆಯಿರಿ. ಬಳಿಕ ಸಣ್ಣ ತುಂಡುಗಳಾಗಿ ಕತ್ತರಿಸಿ, ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಇದಕ್ಕೆ ರುಚಿಗೆ ತಕ್ಕಂತೆ ಉಪ್ಪು, ಚಿಟಿಕೆ ಕರಿಮೆಣಸಿನ ಪುಡಿ ಮತ್ತು ನಿಂಬೆ ರಸವನ್ನು ಸೇರಿಸಿದರೆ ಮೂಲಂಗಿ ಎಲೆಗಳ ಜ್ಯೂಸ್ ಸವಿಯಲು ಸಿದ್ಧವಾಗುತ್ತದೆ.

Leave a Reply

Your email address will not be published. Required fields are marked *