ಹೊಸಕೋಟೆ : ಚೆನೈ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆ ಹೊಸಕೋಟೆ ತಾಲ್ಲೂಕಿನ ಕೊಳತೂರು ಬಳಿಯ ಜಂಕ್ಷನ್ ಸರಿಯಿಲ್ಲವೆಂದು ಸ್ಥಳೀಯರ ಆರೋಪ ಹಿನ್ನಲೆ ಸ್ಥಳಕ್ಕೆ ಸಂಸದ ಡಾ ಸುಧಾಕರ್ ಹಾಗೂ ಮಾಜಿ ಸಚಿವ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಭೇಟಿ.
ಕೊಳತೂರು ಗ್ರಾಮಸ್ಥರಿಗೆ ತೊಂದರೆಯಾಗುವ ರೀತಿಯಲ್ಲಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಅನುಮತಿ ಪಡೆದಿದ್ದ ಪ್ಲಾನ್ ಬದಲಿಗೆ ಬೇರೆ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದರಿಂದ ಕೊಳತೂರು ಮುಕಾಂತರ ಮಾಲೂರು ರಸ್ತೆಗೆ ಸಂಪರ್ಕ ಕಲ್ಪಿಸುವ ವಾಹನಗಳಿಗೆ ತೊಂದರೆಯಾಗುತ್ತದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಸುಧಾಕರ್ ಮಾತನಾಡಿ, ಈ ಭಗ್ಗೆ ಸಂಬಂಧ ಪಟ್ಟ ಕೇಂದ್ರದ ಅಧಿಕಾರಿಗಳು ಹಾಗೂ ಸಚಿವರ ಜೊತೆ ಚರ್ಚಿಸಿ ಸ್ಥಳೀಯರಿಗೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ನಿರ್ಮಾಣ ಮಾಡಲಾಗುವುದು. ಅಲ್ಲಿಯತನಕ ರಸ್ತೆ ಕಾಮಗಾರಿ ಮಾಡದಂತೆ ಸ್ಥಗಿತಗೊಳಿಸಲು ಹೈವೇ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ತಿಳಿಸಿದ್ದಾರೆ. ಇನ್ನೂ ಮಾಜಿ ಸಚಿವ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಮಾತನಾಡಿ, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ನಿರ್ಮಾಣ ಮಾಡಬೇಕು. ಈ ಭಾಗದ ರಸ್ತೆಯಿಂದ ಸುಮಾರು ವರ್ಷಗಳಿಂದ ಸಂಚರಿಸುತ್ತಾರೆ. ಹೈವೇ ಅಧಿಕಾರಿಗಳು ಕೂಡಲೇ ಸ್ಥಳೀಯರಿಗೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ನಿರ್ಮಾಣ ಮಾಡಬೇಕು ಎಂದು ತಿಳಿಸಿದ್ದಾರೆ.