ಬೆಂಗಳೂರು: ಸುಖ ನಿದ್ದೆಯಲ್ಲಿದ್ದವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಸಂಬಂಧ ಬಂದಿದ್ದ 12 ದೂರುಗಳ ಸಂಬಂಧ ಈ ಶೋಧಕಾರ್ಯ ಕೈಗೊಳ್ಳಲಾಗಿದೆ. ಲೋಕಾಯುಕ್ತ ಪೊಲೀಸ್ನ 100 ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ತುಮಕೂರಿನ ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದುಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸಿ.ಟಿ ಮುದ್ದುಕುಮಾರ್ ಬೆಂಗಳೂರಿನ ನಾಗರಭಾವಿಯ ಎರಡನೇ ಹಂತದಲ್ಲಿ ವಾಸವಾಗಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿ ಕಚೇರಿ ಇದೆ