ಲಂಡನ್ : ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ವಿದೇಶ ಪ್ರವಾಸದಲ್ಲಿದ್ದಾರೆ. ಎರಡು ದಿನಗಳ ಭೇಟಿಗಾಗಿ ಬ್ರಿಟನ್ಗೆ ತೆರಳಿದ್ದು, ಅಲ್ಲಿ ಭಾರತೀಯರಿಂದ ಭವ್ಯ ಸ್ವಾಗತ ದೊರೆತಿದೆ. ಎಲ್ಲೆಲ್ಲೂ ಜೈಕಾರ ಮೊಳಗಿತ್ತು. ಮೋದಿಯನ್ನು ನೋಡಲು ಜನರ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು.

ರಕ್ಷಣೆ, ವ್ಯಾಪಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ವಿಸ್ತರಿಸಲು ಪ್ರಧಾನಿ ಮೋದಿ ಅಲ್ಲಿಗೆ ಹೋಗಿದ್ದಾರೆ. ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಔಪಚಾರಿಕಗೊಳಿಸಲಾಗುತ್ತದೆ. ಈ ವ್ಯಾಪಾರ ಒಪ್ಪಂದವನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಜುಲೈ 25 ರಿಂದ 26 ರವರೆಗೆ ಮಾಲ್ಡೀವ್ಸ್ ಪ್ರವಾಸದಲ್ಲಿರಲಿದ್ದಾರೆ.