ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ ಚಾಲಕ

ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ ಚಾಲಕ

ಭೀಕರ ಅಪಘಾತದಲ್ಲಿ ನಾಲ್ವರಿಗೆ ಗಾಯ  

ಮಾಗಡಿ : ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ. ಕುಣಿಗಲ್ ಮೂಲದ ರಾಮು ಎಂಬ ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ನಿಯಂತ್ರಣ ತಪ್ಪಿದ ಕ್ಯಾಂಟರ್ ಎದುರಿಗೆ ಹೋಗುತ್ತಿದ್ದ ಕಾರು ಹಾಗೂ ಮತ್ತೇರಡು ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರೊಂದು ರಸ್ತೆಯಲ್ಲೇ ಪಲ್ಟಿಯಾಗಿದ್ದು, ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ನಂತರವೂ ದರ್ಪ ತೋರಿದ ಚಾಲಕ ರಾಮು ಮೇಲೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೊಚ್ಚಿಗೆದ್ದ ಗ್ರಾಮಸ್ಥರು ಚಾಲಕನನ್ನು ಹಿಡಿದು ಸ್ಥಳದಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಾಗಡಿ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಿಸಿ ಚಾಲಕ ರಾಮುವನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *