ವಿಚ್ಛೇದಿತ ಮಹಿಳೆಗೂ, ಮನೆ ಕಟ್ಟಲು ಬಂದ ಗೌಂಡಿಗೂ ಲವ್​.

ವಿಚ್ಛೇದಿತ ಮಹಿಳೆಗೂ, ಮನೆ ಕಟ್ಟಲು ಬಂದ ಗೌಂಡಿಗೂ ಲವ್​:

ವಿಚ್ಛೇದಿತ ಮಹಿಳೆ ಮನೆಯ ಆಸ್ತಿಗಾಗಿ ದಾಳಿಗೆ ಬ*!

ಬೆಳಗಾವಿ : ವಿಚ್ಛೇದಿತ ಮಹಿಳೆಯ ನಂಬಿಕೆ ಗಳಿಸಿ ಆಕೆಯ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದ ವ್ಯಕ್ತಿಯೋರ್ವ ಆಕೆಯ ಆಸ್ತಿ ಲಪಟಾಯಿಸುವ ಆಸೆಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಳೆದ ಮಾರ್ಚ್ 12ರಂದು ಅಥಣಿ ಪಟ್ಟಣದ ಹೊರ ವಲಯದ ಕಬ್ಬಿನ ಗದ್ದೆಯೊಂದರಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ ಪ್ರಕರಣ ಬೆನ್ನತ್ತಿದ್ದ ಪೊಲೀಸರು ಮೃತಳನ್ನು ಅಥಣಿ ಪಟ್ಟಣದ ನಿವಾಸಿ ಸುಜಾತಾ ಪವಾರ್ (35) ಎಂದು ಗುರುತಿಸಿದ್ದು, ಈಕೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪಿ ಕುಮಾರ್ ಹವಾಲ್ದಾರ್​​ ಎಂಬಾತನನ್ನು ಬಂಧಿಸಿದ್ದಾರೆ.

ಇನ್ನು ಕೊಲೆಯಾಗಿರುವ ಈ ಸುಜಾತಳನ್ನ 16 ವರ್ಷಗಳ ಹಿಂದೆ ಹಾರೂಗೇರಿ ಯುವಕನೊಬ್ಬನ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಗಂಡು ಮಗುವೂ ಇತ್ತು. ಆದರೆ ಕುಡಿದು ಬಂದು ಗಂಡ ಕಿರುಕುಳ ನೀಡುತ್ತಾನೆ ಎಂಬ ಕಾರಣಕ್ಕೆ 13 ವರ್ಷಗಳ ಬಳಿಕ ಪತಿ ತೊರೆದು ಸುಜಾತಾ  ತವರು ಸೇರಿದ್ದಳು.

ಇದರಿಂದ ಪಿತ್ತ ನೆತ್ತಿಗೇರಸಿಕೊಂಡಿದ್ದ ಈತ ಮಾರ್ಚ್ 5ರಂದು ಮಧ್ಯಾಹ್ನ ಕುಡಿದು ಬಂದು ಸುಜಾತ ಜೊತೆಗೆ ಗಲಾಟೆ ನಡೆಸಿದ್ದಾನೆ. ಮಾತಾಡೋದಿದೆ ಅಂತಾ ಬೈಕ್ ಮೇಲೆ ಕರೆದುಕೊಂಡು ಹೋಗಿ ಕೊಲೆ ಮಾಡಿ ವಾಪಾಸ್ ಆಕೆಯ ಮನೆಗೆ ಬಂದು ಸಾಮಗ್ರಿಗಳ ಸಮೇತ ಹೊರ ನಡೆದಿದ್ದಾನೆ. ಈ ವೇಳೆ ಸುಜಾತಾಳ 15ವರ್ಷದ ಮಗ ಪ್ರಶ್ನೆ ಮಾಡಿದಾಗ ತನ್ನ ಜೊತೆಗೆ ಜಗಳ ಮಾಡಿ ಗೆಳತಿ ಮನೆಗೆ ನಿಮ್ಮಮ್ಮ ಹೋಗಿದ್ದಾಳೆ. ನಾನು ಬೈಯುತ್ತೇನೆಂದು ಪೋನ್ ಸ್ವಿಚ್ಛ್ ಆಫ್ ಮಾಡಿದ್ದಾಳೆ. ತಾನು ಕೂಡ ಜಾತ್ರೆ ಹೋಗುತ್ತೇನೆಂದು ಸುಳ್ಳು ಹೇಳಿ ತೆರಳಿದ್ದ. ಇತ್ತ ಸುಜಾತಾ ತಾಯಿ ಕೂಡ ಏನೋ ಬೇಜಾರಾಗಿ ಮಗಳು ಪ್ರತಿ ವರ್ಷದಂತೆ ಈ ಬಾರಿಯೂ ಗೆಳೆತಿಯರ ಜೊತೆಗೆ ಶ್ರೀಶೈಲಕ್ಕೆ ಹೋಗಿದ್ದಾಳೆ ಎಂದು ಸುಮ್ಮನಾಗಿದ್ದಳು. ಆದರೆ  ಮನೆಗೆ ಪೊಲೀಸರು ಬಂದು ಸುಜಾತಾ ಸಾವಿನ ವಿಷಯ ತಿಳಿಸುತ್ತಿದ್ದಂತೆ ಕುಮಾರನ ಕಳ್ಳಾಟ ಬಯಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *