LPG ಕೊರತೆ: ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಸಿಲಿಂಡರ್ ದರ 4 ಸಾವಿರಕ್ಕೆ ಏರಿಕೆ?

LPG ಕೊರತೆ: ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಸಿಲಿಂಡರ್ ದರ 4 ಸಾವಿರಕ್ಕೆ ಏರಿಕೆ?

ಹೋಟೆಲ್ ಉದ್ಯಮ ಸಂಕಷ್ಟದಲ್ಲಿ ಇದೆ

ಹುಬ್ಬಳ್ಳಿ : ಹೋಟೆಲ್ ಉದ್ಯಮವು ತೀವ್ರ LPG ಸಿಲಿಂಡರ್ ಕೊರತೆಯಿಂದ ತತ್ತರಿಸಿದೆ. ವಾಣಿಜ್ಯ ಸಿಲಿಂಡರ್‌ಗಳು ಲಭ್ಯವಿಲ್ಲದೆ ಹೋಟೆಲ್ ಮಾಲೀಕರು ಪರದಾಡುತ್ತಿದ್ದಾರೆ. ಒಂದು ಸಿಲಿಂಡರ್‌ಗೆ 4,000-5,000 ನೀಡಲು ಸಿದ್ಧರಿದ್ದರೂ ಸಿಲಿಂಡರ್‌ಗಳು ಸಿಗುತ್ತಿಲ್ಲ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಈ ಸಮಸ್ಯೆಯಿಂದಾಗಿ ಹೋಟೆಲ್‌ಗಳು ದೋಸೆ, ಪೂರಿ ಸೇರಿದಂತೆ ಹಲವು ಖಾದ್ಯಗಳ ತಯಾರಿಕೆಯನ್ನು ನಿಲ್ಲಿಸಿವೆ. ಸಿಲಿಂಡರ್ ಕೊರತೆಯು ಕಾರ್ಮಿಕರ ಬದುಕಿನ ಮೇಲೆ ನೇರ ಪರಿಣಾಮ ಬೀರಿದೆ. ಹಲವು ಹೋಟೆಲ್‌ಗಳು ಈಗಾಗಲೇ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಿವೆ, ಇನ್ನೂ ಕೆಲವು ಹೋಟೆಲ್‌ಗಳು ಮುಚ್ಚುವ ಭೀತಿಯಲ್ಲಿವೆ. ಇದರಿಂದ ಪ್ರತಿದಿನ ದುಡಿದು ಜೀವನ ಸಾಗಿಸುವ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದು, ತಮ್ಮ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *