ಶ್ವಾಸಕೋಶದ ಕ್ಯಾನ್ಸರ್: ಭಯ ಬೇಡ, ಇಷ್ಟು ಮಾಡಿ ಸಾಕು.

ಶ್ವಾಸಕೋಶದ ಕ್ಯಾನ್ಸರ್: ಭಯ ಬೇಡ, ಇಷ್ಟು ಮಾಡಿ ಸಾಕು.

ಕ್ಯಾನ್ಸರ್ ಎಂಬ ಪದವೇ ಭಯ ಹುಟ್ಟಿಸುತ್ತದೆ. ಆದರೆ ಯಾವುದೇ ರೋಗವಾಗಲಿ ನಾವು ಮುನ್ನೆಚ್ಚರಿಕೆ ವಹಿಸಿದರೆ ಅದನ್ನು ಹಿಮ್ಮೆಟ್ಟಿಸಬಹುದು. ಅಂತಹ ಶಕ್ತಿ ನಮ್ಮ ದೇಹಕ್ಕಿರುತ್ತದೆ. ಅದೇ ರೀತಿ ಶ್ವಾಸಕೋಶದ ಕ್ಯಾನ್ಸರ್ ಲಕ್ಷಣಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ತಡೆಯುವ ಪ್ರಯತ್ನ ಎಲ್ಲರೂ ಮಾಡಬೇಕಾಗುತ್ತದೆ. ಅದಕ್ಕಾಗಿಯೇ ವಿಶ್ವ ಶ್ವಾಸಕೋಶದ ಕ್ಯಾನ್ಸರ್ ದಿನವನ್ನು ಪ್ರತಿ ವರ್ಷ ಆಗಸ್ಟ್ 1 ರಂದು ಆಚರಿಸಲಾಗುತ್ತದೆ. ಈ ದಿನ ಶ್ವಾಸಕೋಶದ ಕ್ಯಾನ್ಸರ್ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಲು ಮತ್ತು ಈ ಕಾಯಿಲೆಯಿಂದ ಬಳಲುತ್ತಿರುವವರನ್ನು ಬೆಂಬಲಿಸಲು ಮೀಸಲಿರಿಸಲಾಗಿದೆ.

ಜಾಗತಿಕವಾಗಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಕ್ಯಾನ್ಸರ್ ಅಗ್ರಸ್ಥಾನದಲ್ಲಿದೆ. ಅದರಲ್ಲಿಯೂ ಈ ಶ್ವಾಸಕೋಶದ ಕ್ಯಾನ್ಸರ್ ಗೆಬಲಿಯಾಗುತ್ತಿರುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ಯಾವುದೇ ರೋಗವಾಗಲಿ ನಾವು ಮುನ್ನೆಚ್ಚರಿಕೆ ವಹಿಸಿದರೆ ಅದನ್ನು ಹಿಮ್ಮೆಟ್ಟಿಸಬಹುದು. ಅಂತಹ ಶಕ್ತಿ ನಮ್ಮ ದೇಹಕ್ಕಿರುತ್ತದೆ. ಅದೇ ರೀತಿ ಶ್ವಾಸಕೋಶದ ಕ್ಯಾನ್ಸರ್ ಲಕ್ಷಣಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ತಡೆಯುವ ಪ್ರಯತ್ನ ಎಲ್ಲರೂ ಮಾಡಬೇಕಾಗುತ್ತದೆ ಆಗ ಮಾತ್ರ ಇಂತಹ ಮಹಾಮಾರಿ ಕಾಯಿಲೆಗಳನ್ನು ತಡೆಯುವುದಕ್ಕೆ ಸಾಧ್ಯವಾಗುತ್ತದೆ. ಅದಕ್ಕಾಗಿಯೇ ವಿಶ್ವ ಶ್ವಾಸಕೋಶದ ಕ್ಯಾನ್ಸರ್ ದಿನವನ್ನು ಪ್ರತಿ ವರ್ಷ ಆಗಸ್ಟ್ 1 ರಂದು ಆಚರಿಸಲಾಗುತ್ತದೆ. ಈ ದಿನ ಶ್ವಾಸಕೋಶದ ಕ್ಯಾನ್ಸರ್ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಲು ಮತ್ತು ಈ ಕಾಯಿಲೆಯಿಂದ ಬಳಲುತ್ತಿರುವವರನ್ನು ಬೆಂಬಲಿಸಲು ಮೀಸಲಿರಿಸಲಾಗಿದೆ.

ಈ ದಿನದ ಉದ್ದೇಶವೇನು?

ಶ್ವಾಸಕೋಶದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು, ಅದರ ಕಾರಣಗಳು ಮತ್ತು ಲಕ್ಷಣಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಚಿಕಿತ್ಸೆಯ ಆಯ್ಕೆಗಳ ಬಗ್ಗೆ ತಿಳಿಸುವುದು ಈ ದಿನ ಆಚರಣೆ ಮಾಡುವುದರ ಮುಖ್ಯ ಉದ್ದೇಶವಾಗಿದೆ. ಮಾತ್ರವಲ್ಲ ಈ ಕುರಿತು ಹೆಚ್ಚಿನ ಸಂಶೋಧನೆ ನಡೆಸಲು ಹಣವನ್ನು ಸಂಗ್ರಹಿಸಲು ಮತ್ತು ರೋಗವನ್ನು ತಡೆಗಟ್ಟುವ ಮಾರ್ಗಗಳನ್ನು ಅನ್ವೇಷಿಸಲು ಒಂದು ಅವಕಾಶವಾಗಿದೆ. ಈ ದಿನದಂದು, ಶ್ವಾಸಕೋಶದ ಕ್ಯಾನ್ಸರ್ನಿಂದ ಬಳಲುತ್ತಿರುವವರನ್ನು ಬೆಂಬಲಿಸುವುದು ಮತ್ತು ಅವರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡಿ ಅವರ ಕುಟುಂಬಗಳಿಗೆ ಬೆಂಬಲ ನೀಡುವುದು ಬಹಳ ಮುಖ್ಯ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಇದೊಂದು ಜಾಗತಿಕ ಆರೋಗ್ಯ ಸಮಸ್ಯೆಯಾಗುತ್ತಿದ್ದು ಪ್ರತಿ ವರ್ಷ ಅನೇಕ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹಾಗಾಗಿ ಈ ದಿನದಂದು, ಶ್ವಾಸಕೋಶದ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವುದು ಅನಿವಾರ್ಯವಾಗಿದೆ.

ಲಕ್ಷಣಗಳು ಹೇಗಿರುತ್ತವೆ?

•          ಕೆಮ್ಮು

•          ಉಸಿರಾಡಲು ಕಷ್ಟವಾಗುವುದು

•          ಕೆಮ್ಮುವಾಗ ರಕ್ತ ಕಂಡು ಬರುವುದು

•          ಬೆನ್ನು ನೋವು

•          ಖಿನ್ನತೆ ಹಾಗೂ ಮನಸ್ಥಿತಿಯಲ್ಲಿನ ಬದಲಾವಣೆಗಳು

•          ವಿಪರೀತವಾದ ತೂಕ ನಷ್ಟ

•          ಆಯಾಸ

•          ಎದೆ ನೋವು

•          ತಲೆ ನೋವು

ಶ್ವಾಸಕೋಶದ ಕ್ಯಾನ್ಸರ್ ತಡೆಯಲು ಇಲ್ಲಿವೆ ಸಲಹೆಗಳು:

•          ಧೂಮಪಾನವು ಶ್ವಾಸಕೋಶದ ಕ್ಯಾನ್ಸರ್ನ ಮುಖ್ಯ ಕಾರಣವಾಗಿದೆ. ನೀವು ಕೂಡ ಧೂಮಪಾನ ಮಾಡುತ್ತಿದ್ದರೆ, ತಕ್ಷಣವೇ ಈ ಅಭ್ಯಾಸವನ್ನು ತ್ಯಜಿಸಲು ಪ್ರಯತ್ನಿಸಿ. ಬೇಕಾದಲ್ಲಿ ವೃತ್ತಿಪರ ಸಹಾಯವನ್ನು ಪಡೆಯಿರಿ, ಅದಕ್ಕೆ ಹಿಂಜರಿಯಬೇಡಿ. ಧೂಮಪಾನ ತ್ಯಜಿಸುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ.

•          ವಾಯುಮಾಲಿನ್ಯ ಕೂಡ ಶ್ವಾಸಕೋಶದ ಕ್ಯಾನ್ಸರ್ಗೆ ಒಂದು ಅಪಾಯಕಾರಿ ಅಂಶವಾಗಿದೆ. ಹಾಗಾಗಿ ಹೊರಗೆ ಹೋಗುವಾಗ ಮಾಸ್ಕ್ ಧರಿಸಿ.

•          ಕೆಲವು ರಾಸಾಯನಿಕಗಳು ಶ್ವಾಸಕೋಶದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತವೆ. ಹಾಗಾಗಿ ಕೆಲಸದ ಸ್ಥಳದಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಿ.

•          ಸಾಧ್ಯವಾದಷ್ಟು ಆರೋಗ್ಯಕರ ಆಹಾರವನ್ನು ಸೇವಿಸಿ. ನಿಮ್ಮ ಆಹಾರದಲ್ಲಿ ಹಣ್ಣು, ತರಕಾರಿ ಮತ್ತು ಧಾನ್ಯಗಳಿರಲಿ. ಜೊತೆಗೆ ಉತ್ಕರ್ಷಣ ನಿರೋಧಕಗಳು ಮತ್ತು ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಿ. ಇವುಗಳು ಶ್ವಾಸಕೋಶದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

•          ನಿಯಮಿತವಾಗಿ ವ್ಯಾಯಾಮ ಮಾಡಿ. ಏಕೆಂದರೆ ನಿಯಮಿತ ವ್ಯಾಯಾಮ ನಿಮ್ಮ ಶ್ವಾಸಕೋಶದ ಕಾರ್ಯವನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದು ಶ್ವಾಸಕೋಶದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

•          ಶ್ವಾಸಕೋಶದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚಲು ನಿಯಮಿತ ವೈದ್ಯಕೀಯ ತಪಾಸಣೆ ಮುಖ್ಯವಾಗಿದೆ. ಹಾಗಾಗಿ ವೈದ್ಯರೊಂದಿಗೆ ಸಮಾಲೋಚಿಸಿ ಅಗತ್ಯವಿರುವ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ. ಈ ಸಲಹೆಗಳನ್ನು ಅನುಸರಿಸುವುದರಿಂದ, ಶ್ವಾಸಕೋಶದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು.

Leave a Reply

Your email address will not be published. Required fields are marked *