ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಕನಿಷ್ಠ ನಾಲ್ವರು ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಛತ್ತೀಸ್ಗಢದ ನಾರಾಯಣಪುರದ ಗಡಿ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಗಡ್ಚಿರೋಲಿ ಪೊಲೀಸರ ಸಿ60 ಕಮಾಂಡೋಮತ್ತು ಸಿಆರ್ಪಿಎಫ್ ತಂಡ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿರುವಂತೆಯೇ, ಪೂರ್ವ ಮಹಾರಾಷ್ಟ್ರ ಜಿಲ್ಲೆಯ ಭಾಮ್ರಗಢ ತಾಲೂಕಿನ ಅರಣ್ಯದಲ್ಲಿ ಎನ್ ಕೌಂಟರ್ ನಡೆದಿದೆ. ನವೆಂಬರ್ 20 ರಂದು ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ-ಛತ್ತೀಸ್ಗಢ ಗಡಿಯಲ್ಲಿರುವ ಅರಣ್ಯದಲ್ಲಿ ನಕ್ಸಲೀಯರ ಗುಂಪು ಜಮಾಯಿಸಿ ದಾಳಿ ನಡೆಸಲು ಯೋಜಿಸಿದೆ ಎಂದು ಗಡ್ಚಿರೋಲಿ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕಚೇರಿ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.
ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ C-60 ಕಮಾಂಡೋಗಳ 22 ತಂಡಗಳು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಎರಡು ತುಕಡಿಗಳು ಅರಣ್ಯ ಪ್ರದೇಶದ ಪ್ರತ್ಯೇಕ ಸ್ಥಳಗಳಿಂದ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ. ಪೊಲೀಸರು ಮತ್ತು ಸಿಆರ್ಪಿಎಫ್ ಸಿಬ್ಬಂದಿ ಮಾವೋವಾದಿಗಳಿದ್ದ ಪ್ರದೇಶಕ್ಕೆ ತಲುಪಿದ ತಕ್ಷಣ ನಕ್ಸಲೀಯರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ತಕ್ಷಣವೇ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಐವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.
ಕಾಡಿನಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮಂಗಳವಾರ ಗಡ್ಚಿರೋಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹತ್ಯೆಗೀಡಾದ ನಕ್ಸಲೀಯರ ಗುರುತುಗಳನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.