“ಶ್ರೀನಗರ ನೌಗಾಮ್ ಪೊಲೀಸ್ ಠಾಣೆಯಲ್ಲಿ ಭಾರೀ ಸ್ಫೋಟ: 6 ಪೊಲೀಸರು ದುರ್ಮರಣ.

 “ಶ್ರೀನಗರ ನೌಗಾಮ್ ಪೊಲೀಸ್ ಠಾಣೆಯಲ್ಲಿ ಭಾರೀ ಸ್ಫೋಟ: 6 ಪೊಲೀಸರು ದುರ್ಮರಣ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ತಡರಾತ್ರಿ ಭಾರಿ ಸ್ಫೋಟ ಸಂಭವಿಸಿದೆ. ಹರಿಯಾಣದ ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕ ವಸ್ತುಗಳ ಮಾದರಿ ಸಂಗ್ರಹಿಸಿಟ್ಟಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿ 6 ಮಂದಿ ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಪೊಲೀಸ್ ಠಾಣೆಯಿಂದ ಭಾರಿ ಪ್ರಮಾಣದ ಹೊಗೆ ಮತ್ತು ಜ್ವಾಲೆಗಳು ಹೊರಬರುತ್ತಿರುವುದು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಲ್ಲಿ ಕಾಣಿಸಿವೆ. ಗಾಯಗೊಂಡ ಪೊಲೀಸರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.

ನವದೆಹಲಿಯ ಕೆಂಪು ಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಸಂಭವಿಸಿದ ಕೆಲವೇ ದಿನಗಳಲ್ಲಿ ಇದೀಗ ಶ್ರೀನಗರದಲ್ಲೂ ಸ್ಫೋಟ ಸಂಭವಿಸಿದೆ. ದೆಹಲಿ ಸ್ಫೋಟದಲ್ಲಿ ಒಟ್ಟು 13 ಜನ ಸಾವಿಗೀಡಾಗಿದ್ದರು.

ದೆಹಲಿ ಸ್ಫೋಟಕ್ಕೂ ಇದಕ್ಕೂ ಇದೆ ನಂಟು!

ಬಂಧಿತ ಉಗ್ರ, ವೈದ್ಯ ಮುಜಮ್ಮಿಲ್ ಗನೈ ಬಾಡಿಗೆ ಮನೆಯಿಂದ ವಶಪಡಿಸಿಕೊಂಡ 360 ಕಿಲೋಗ್ರಾಂಗಳಷ್ಟು ಸ್ಫೋಟಕಗಳ ಪೈಕಿ ಒಂದಷ್ಟನ್ನು ಈಗಿನ ತನಿಖೆಯ ಅಂಗವಾಗಿ ಮಾದರಿಯಾಗಿ ಸಂಗ್ರಹಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವುಗಳಿಂದಾಗಿಯೇ ಸ್ಫೋಟ ಸಂಭವಿಸಿದೆ. ಸದ್ಯ ಘಟನಾ ಸ್ಥಳದಿಂದ ಆರು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು ಮೃತರನ್ನು ಗುರುತು ಪತ್ತೆ ಕಾರ್ಯ ಇನ್ನಷ್ಟೇ ಆಗಬೇಕಿದೆ. ಶವಗಳನ್ನು ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಗೆ ಕೊಂಡೊಯ್ಯಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *