ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಇಂದು ಭಾರತಕ್ಕೆ ಬರಲಿದ್ದು, 5 ದಿನ ಪ್ರವಾಸ ಕೈಗೊಂಡಿದ್ದಾರೆ. ಇಂದಿನಿಂದ ಅ.10ರ ವರೆಗೆ ಭಾರತದಲ್ಲಿ ಮುಯಿಝು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೀಡಿದ ಅಧಿಕೃತ ಆಹ್ವಾನದ ಮೇರೆಗೆ ಆಗಮಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಧಿಕಾರ ವಹಿಸಿಕೊಂಡ ನಂತರ ಇದು ಮುಯಿಝು ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಈ ಭೇಟಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಇತರ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ.
ಈ ವರ್ಷದ ಆರಂಭದಲ್ಲಿ, ಮಾಲ್ಡೀವ್ಸ್ ಅಧ್ಯಕ್ಷರು ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದಕ್ಕೂ ಮೊದಲು ಕಳೆದ ವರ್ಷ ಡಿಸೆಂಬರ್ 1 ರಂದು ದುಬೈನಲ್ಲಿ COP28 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಮೊಹಮ್ಮದ್ ಮುಯಿಝು ಅವರು ಭೇಟಿಯಾಗಿದ್ದರು.