ಮದುವೆಯಿಂದ ಮನೆಗೆ ವಾಪಸ್ ಆಗುತ್ತಿದ್ದ ಕುಟುಂಬಕ್ಕೆ ಆಡಿ ಕಾರು ಡಿಕ್ಕಿ: ಚಾಲಕ ಪರಾರಿ
ಬೆಂಗಳೂರು: ಮದುವೆ ಸಮಾರಂಭ ಮುಗಿಸಿ ಮನೆಗೆ ಮರಳುತ್ತಿದ್ದ ಕುಟುಂಬದ ಮೇಲೆ ವೇಗವಾಗಿ ಬಂದ ಆಡಿ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮಹೇಶ್ (40) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಹೇಶ್ ಅವರ ಪತ್ನಿ ಮತ್ತು ಪುತ್ರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮದುವೆ ಕಾರ್ಯಕ್ರಮ ಮುಗಿಸಿ ಕುಟುಂಬ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 8.45ರ ವೇಳೆಗೆ ವೇಗವಾಗಿ ಬಂದ ಆಡಿ ಕಾರು ಕುಟುಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಚಿಕ್ಕಜಾಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅಪಘಾತ ಎಸಗಿ ಪರಾರಿಯಾದ ಆಡಿ ಕಾರು ಚಾಲಕನ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
For More Updates Join our WhatsApp Group :



