ಉತ್ತರ ಪ್ರದೇಶ : ಪೋಷಕರು ಹಾಗೂ ಸಹೋದರಿಯನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ. ದಾಳಿಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದಿಲಿಯಾ ಗ್ರಾಮದಲ್ಲಿ ಭಾನುವಾರ ಈ ಭೀಕರ ಹತ್ಯೆಗಳು ನಡೆದಿವೆ.ಪೊಲೀಸರ ಪ್ರಕಾರ, ಆರೋಪಿ ತನ್ನ ತಂದೆ, ತಾಯಿ ಮತ್ತು ಸಹೋದರಿಯನ್ನು ಕೊಲೆ ಮಾಡಿದ್ದಾನೆ.

ಅವರೆಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಗ್ರಾಮದಲ್ಲಿ ಶಾಂತಿ ಕಾಪಾಡಲು ದೊಡ್ಡ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಕುಟುಂಬದೊಳಗೆ ದೀರ್ಘಕಾಲದ ಜಮೀನು ವಿವಾದವಿದ್ದು, ಇದು ಕೊಲೆಗಳಿಗೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಕಾಸ್ಗಂಜ್‌ನಲ್ಲಿ ನಡೆದ ಇದೇ ರೀತಿಯ ಪ್ರಕರಣದಲ್ಲಿ ಒಂಬತ್ತು ಮಕ್ಕಳ ತಾಯಿ ರೀನಾ ಮತ್ತು ಆಕೆಯ ಪ್ರಿಯಕರ ಹನೀಫ್ ಸೇರಿ ಆಕೆಯ ಪತಿಯನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿತ್ತು.